ರಕ್ತದಲ್ಲಿ ಸುದೀಪ್ ಚಿತ್ರ ಬಿಡಿಸಿದ ಮಹಿಳಾ ಅಭಿಮಾನಿ: ಕೈ ಮುಗಿದ ಕಿಚ್ಚ

Public TV
2 Min Read
Sudeep 10

ಕಿಚ್ಚ ಸುದೀಪ್ ಅಭಿಮಾನಿಗಳು (Fans)ಒಂದಿಲ್ಲೊಂದು ರೀತಿಯಲ್ಲಿ ನೆಚ್ಚಿನ ನಟಿಗೆ ಪ್ರೀತಿ ತೋರಿಸುತ್ತಲೇ ಇರುತ್ತಾರೆ. ಇದೀಗ ಶಿವಮೊಗ್ಗದ (Shimoga) ಅಭಿಮಾನಿ ವೈಷ್ಣವಿ (Vaishnavi) ಎನ್ನುವವರು ತಮ್ಮದೇ ರಕ್ತದಿಂದ ಸುದೀಪ್ ಅವರ ಚಿತ್ರ ಬಿಡಿಸಿದ್ದಾರೆ. ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಮಾಡಿದ್ದಾರೆ. ಈ ಚಿತ್ರವನ್ನು ಮರುಹಂಚಿಕೊಂಡಿರುವ ಸುದೀಪ್, ಕೈ ಮುಗಿಯುವ ಎಮೋಜಿ ಹಾಕಿದ್ದಾರೆ.

Sudeep 1 2

ಮಹಿಳಾ ಅಭಿಮಾನಿಯ ರಕ್ತದಲ್ಲಿ (Blood) ತಯಾರಾದ ಚಿತ್ರಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದರೆ ಇನ್ನೂ ಹಲವರು ರಕ್ತ ಅಮೂಲ್ಯವಾದದ್ದು ಅದನ್ನು ಈ ರೀತಿ ಹಾಳು ಮಾಡಬೇಡಿ. ಅಭಿಮಾನಿವನ್ನು ರಕ್ತದಾನ ಮಾಡುವ ಮೂಲಕ ತೋರಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಕಾಮೆಂಟ್ಸ್ ಏನೇ ಬರುತ್ತಿದ್ದರೂ ಅಭಿಮಾನಿಯ ಬಗ್ಗೆ ಸಾಕಷ್ಟು ಜನರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್ ಶೋ’ ಸೆನ್ಸಾರ್ ಕುರಿತು ಹೈಕೋರ್ಟ್ ಕಳವಳ

sudeep

ಚಿತ್ರೀಕರಣಕ್ಕೆ ಹೊರಟು ನಿಂತ ಸುದೀಪ್

ಸ್ಯಾಂಡಲ್‌ವುಡ್‌ನಲ್ಲಿ ಕಿಚ್ಚ ಸುದೀಪ್(Kiccha Sudeep)- ನಿರ್ಮಾಪಕ ಕುಮಾರ್ ಕಾಲ್‌ಶೀಟ್ ಕದನಕ್ಕೆ ಪೂರ್ಣ ವಿರಾಮ ಬೀಳುವ ಮುಂಚಯೇ ಕಿಚ್ಚನ 46 ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಕುಮಾರ್ ಜೊತೆಗಿನ ಸಂಧಾನದ ಮಾತುಕತೆ ನಡೆಯುತ್ತಿದೆ. ಈ ವಾರದ ಅಂತ್ಯದಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ. ಈ ಬೆನ್ನಲ್ಲೇ ವಿವಾದ ಬದಿಗಿಟ್ಟು ಕಾಯಕವೇ ಕೈಲಾಸ ಅಂತಾ ಸುದೀಪ್ ಹೊಸ ಸಿನಿಮಾದ ಶೂಟಿಂಗ್‌ನತ್ತ ಮುಖ ಮಾಡಿದ್ದಾರೆ.‌

Sudeep 9

‘ವಿಕ್ರಾಂತ್ ರೋಣ’ ಸಿನಿಮಾದ ಬಳಿಕ ತನ್ನ ಜೊತೆ ಸಿನಿಮಾ ಮಾಡ್ತಾರೆ ಅಂತಾ ಮಾತುಕತೆ ಆಗಿತ್ತು. ಹಣ ಪಡೆದು ಸಾಕಷ್ಟು ಸಮಯದಿಂದ ಕಾಲ್‌ಶೀಟ್ ನೀಡದೇ ಸುದೀಪ್ ಸತಾಯಿಸುತ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ (Producer Kumar) ಆರೋಪಿಸಿದ್ದರು. ಇದಾದ ಬಳಿಕ ಸುದೀಪ್ ಕಾನೂನು ಸಮರ ಸಾರಿದ್ದರು. ಬಳಿಕ ರವಿಚಂದ್ರನ್ (Ravichandran) ಅವರ ಜೊತೆ ಕುಮಾರ್-ಸುದೀಪ್ ಇಬ್ಬರ ಸಂಧಾನ ಸಭೆ ನಡೆದಿತ್ತು. ಆದರೆ ಇದು ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ. ಕೊನೆಯ ಮೀಟಿಂಗ್‌ನಲ್ಲಿ ಶಿವಣ್ಣ (Shivarajkumar) ಕೂಡ ಭಾಗಿಯಾಗಲಿದ್ದಾರೆ. ಬಳಿಕ ಕಾಲ್‌ಶೀಟ್ ಕದನಕ್ಕೆ ಬ್ರೇಕ್ ಸಿಗಲಿದೆ.

 

ʼವಿಕ್ರಾಂತ್ ರೋಣ’ (Vikrant Rona) ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಸುದೀಪ್ ಒಂದು ಬ್ರೇಕ್ ಪಡೆದರು. ವೃತ್ತಿ ಜೀವನದಲ್ಲಿ ಅವರು ಪಡೆದ ಮೊದಲ ಬ್ರೇಕ್ ಇದು ಅನ್ನೋದು ವಿಶೇಷ. ಈ ಸಮಯದಲ್ಲಿ ಸುದೀಪ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ಕೊಟ್ಟರು. ಚುನಾವಣಾ ಪ್ರಚಾರದಲ್ಲಿ ಭಾಗಿ ಆದರು. ಬಿಜೆಪಿ ಕ್ಷೇತ್ರದ ಪರ ಪ್ರಚಾರಕ್ಕೆ ಕಣಕ್ಕೆ ಇಳಿದರು. ಈಗ ಅವರು ಶೂಟಿಂಗ್ ಹೊರಡೋಕೆ ರೆಡಿ ಆಗಿದ್ದಾರೆ.

Web Stories

Share This Article