– ಇಂದು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ (Fenal Cyclone) ಪರಿಣಾಮ ಕರ್ನಾಟಕದಲ್ಲಿ (Karnataka) ಈ ವಾರವೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement
ಇಂದು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಒಳನಾಡಿನ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆ ಹೊರತುಪಡಿಸಿ ಉಳಿದಂತೆ ಯಾವುದೇ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಿಲ್ಲ. ಇದನ್ನೂ ಓದಿ: ಭ್ರಷ್ಟಾಚಾರ ಕೇಸ್ – ರಾಜ್ಯಪಾಲರ ಅಂಗಳದಲ್ಲಿ ಬಿಎಸ್‌ವೈ ಭವಿಷ್ಯ
Advertisement
Advertisement
ಇನ್ನು ಗುರುವಾರದಿಂದ ಫೆಂಗಲ್ ಚಂಡಮಾರುತದ ಎಫೆಕ್ಟ್ ತಗ್ಗಲಿದೆ. ಈ ಹಿನ್ನೆಲೆ ಯಾವುದೇ ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಿಲ್ಲ. ಈ ವಾರ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೇ ರಾಜ್ಯದೆಲ್ಲೆಡೆ ಚಳಿಯ ವಾತಾವರಣ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಯತ್ನಾಳ್ ತಂಡದಿಂದ ಜೆಪಿಸಿ ಅಧ್ಯಕ್ಷರಿಗೆ ವಕ್ಫ್ ವರದಿ ಸಲ್ಲಿಕೆ
Advertisement
ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಹಗರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ವಾರವಿಡೀ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಚಳಿಯ ಪ್ರಮಾಣವೂ ತುಸು ಇಳಿಕೆಯಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: MUDA Scam Exclusive | ಸಿದ್ದರಾಮಯ್ಯಗೆ ಇಡಿ ಶಾಕ್ – ಸಿಎಂ ಪತ್ನಿಗೆ ಸೈಟ್ ಹಂಚಿಕೆಯೇ ಅಕ್ರಮ