ನವದೆಹಲಿ: ಹಿಂಗಾರು ಬೆಳೆಗಳಿಗೆ ರೈರಿಗೆ ಕೈ ಗೆಟುಕುವ ದರದಲ್ಲಿ ರಸಗೊಬ್ಬರ ಪೂರೈಸುವ ನಿಟ್ಟಿನಲ್ಲಿ ಕೇಂದ್ರ ಸಕಾರ ಫಾಸ್ಫೆಟಿಕ್ ಮತ್ತು ಪೊಟಾಸಿಕ್ ರಸಗೊಬ್ಬರಗಳಿಗೆ 28.655 ಕೋಟಿ ರೂಪಾಯಿ ಸಬ್ಸಿಡಿ ಘೋಷಣೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಕ್ಯಾಬಿನೆಟ್ ಸಮಿತಿ ಸಭೆ 2021ರ ಅಕ್ಟೋಬರ್ ನಿಂದ 2022ರ ಮಾರ್ಚ್‍ವರೆಗೆ ಈ ಎರಡೂ ರಸಗೊಬ್ಬರಗಳ ಮೇಲಿನ ಸಬ್ಸಿಡಿ ನೀಡಲು ಸಮ್ಮತಿ ನೀಡಿದೆ.
ನ್ಯೂಟ್ರಿಯೆಂಟ್ ಆಧಾರಿತ ಸಬ್ಸಿಡಿ ಪ್ರಕಾರ ಪ್ರತಿ ಕೇಜಿಯ ಸಾರಾಜನಕಕ್ಕೆ 18.789ರೂ. ಫಾಸ್ಫರಸ್‍ಗೆ 45.323ರೂ, ಪೋಟ್ಯಾಷ್‍ಗೆ 10,116ರೂ, ಮತ್ತು ಸಲ್ಫರ್‍ಗೆ 2.374ರೂ ನಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ್ಸಂಟೇಜ್ ಕೋಲಾಹಲ – ಡಿಕೆಶಿ ಕಲೆಕ್ಷನ್ ಗಿರಾಕಿ ಅಂದ್ರು ಸಲೀಂ
ಡಿಎಪಿ 5716 ಕೋಟಿ ರೂ. ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ. ರೈತರು ಅತಿ ಹೆಚ್ಚು ಬಳಸುವ ಡಿಎಪಿಗೆ ಹೆಚ್ಚುವರಿ 5716 ಕೋಟಿ ರೂಪಾತಿ ನಷ್ಟು ವಿಶೇಷ ಸಬ್ಸಿಡಿ ಪ್ಯಾಕೇಜ್ ನೀಡಲು ನಿರ್ಧರಿಸಲಾಗಿದೆ. ಜೊತೆಗೆ ಕಬ್ಬು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಯಥೇಚ್ಚವಾಗಿ ಬಳಸಲಾಗುವ ಎನ್‍ಪಿಕೆಯ ಮೂರು ಮಾದರಿ ರಸಗೊಬ್ಬರಗಳಿಗೆ 837 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಪ್ರಕಟಿಸಲಾಗಿದೆ. ಇದನ್ನೂ ಓದಿ: ಸಮಂತಾರಿಂದ ದೂರವಾಗ್ತಿದ್ದಂತೆ ಹೊಸ ಮನೆ ಖರೀದಿಸಿದ ನಟ ನಾಗಚೈತನ್ಯ
ಅಲ್ಲದೆ ಈ ಕ್ಯಾಬಿನೆಟ್ ಸಮಿತಿಯು ಮೊಲಾಸಸ್‍ನಿಂದ ಉತ್ಪತ್ತಿಯಾಗುವ ಪೊಟ್ಯಾಷ್‍ಅನ್ನು ಸಹ ನ್ಯೂಟ್ರಿಯೆಂಟ್ ಆಧಾರಿತ ಸಬ್ಸಿಡಿ ಮಾಡಿ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಮುಂಗಾರು ಆರಂಭವಾಗುವ ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರ, ಡಿಎಪಿ ಸೇರಿದಂತೆ ಇತರೆ ಯೂರಿಯಾಯೇತರ ರಸಗೊಬ್ಬರಗಳಿಗೆ 14.755 ಕೋಟಿ ರೂ. ನಷ್ಟು ಸಬ್ಸಿಡಿ ಬಿಡುಗಡೆ ಮಾಡಿತ್ತು. ಕೇಂದ್ರ ಸರ್ಕಾರ 2021-22ರಲ್ಲಿ ರಸಗೊಬ್ಬರಗಳಿಗೆ 79.600 ಕೋಟಿ ರೂಪಾಯಿ ಸಬ್ಸಡಿ ನೀಡಿತ್ತು. ಇದರ ಹೊರತಾಗಿ ಈಗ ಹೆಚ್ಚುವರಿ ಹಣವನ್ನು ನೀಡಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ- ತಪ್ಪಿದ ಭಾರೀ ಅನಾಹುತ