ಮಂಡ್ಯ: ಜಿಲ್ಲೆಯ ಆಲೆಮನೆಯಲ್ಲಿ (Alemane) ಭ್ರೂಣ ಪತ್ತೆ ಹಾಗೂ ಹತ್ಯೆ (Foeticide) ಪ್ರಕರಣ ಬೆಳಕಿಗೆ ಬಂದ ಬಳಿಕ ಜಿಲ್ಲೆಯ ಆರೋಗ್ಯ ಇಲಾಖೆ (Health Department) ಫುಲ್ ಅಲರ್ಟ್ ಆಗಿದೆ. ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್‌ಗಳ (Scanning Centre) ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಲೋಪವಿರುವ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ (Seize) ಮಾಡಲಾಗುತ್ತಿದೆ.
ಮಂಗಳವಾರ ಸಂಜೆ ನಾಗಮಂಗಲದ (Nagamangala) 2 ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಸಿಬ್ಬಂದಿಗಳ ಕಳ್ಳಾಟ ಬೆಳಕಿಗೆ ಬಂದಿದೆ. ಇಲ್ಲಿನ ಸಿಸ್ಟಮ್‌ನಲ್ಲಿದ್ದ ಡೇಟಾ ಡಿಲೀಟ್ ಮಾಡಿ ಅಧಿಕಾರಿಗಳನ್ನು ಕಣ್ತಪ್ಪಿಸಲು ಮಾಲೀಕರು ಪ್ರಯತ್ನ ಪಟ್ಟಿದ್ದಾರೆ. ಅಧಿಕಾರಿಗಳ ಭೇಟಿ ವೇಳೆ ಸಮರ್ಪಕ ದಾಖಲೆ ನೀಡದ ಹಿನ್ನೆಲೆ ಅಧಿಕಾರಿಗಳು ಸಿಸ್ಟಮ್ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಸ್ಕ್ಯಾನಿಂಗ್ ಮಾಡಿದ್ದ ಇಮೇಜ್ ಹಾಗೂ ಡೇಟಾವನ್ನೇ ಸಿಬ್ಬಂದಿಗಳು ಡಿಲೀಟ್ ಮಾಡಿರುವುದು ಕಂಡುಬಂದಿದೆ. ಇದನ್ನೂ ಓದಿ: 5 ದಿನಗಳ ಹಿಂದೆ ಬೆಂಗ್ಳೂರಿನಲ್ಲಿ ಕೊರೊನಾದಿಂದ ವ್ಯಕ್ತಿ ಸಾವು: ದಿನೇಶ್ ಗುಂಡೂರಾವ್
Advertisement
Advertisement
ಮಾಹಿತಿ ಡಿಲೀಟ್ ಮಾಡಿರುವ ಹಿನ್ನೆಲೆ ಇಲ್ಲಿನ 2 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ ಮಾಡಲಾಗಿದೆ. ಕಾವೇರಿ ಹಾಗೂ ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ 2 ವರ್ಷದ ಮಾಹಿತಿ ಹಾಗೂ ಕಾವೇರಿ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ 3 ತಿಂಗಳ ಮಾಹಿತಿ ಡಿಲೀಟ್ ಆಗಿದೆ. ನಾಗಮಂಗಲದ ಸರ್ಕಾರಿ ಆಸ್ಪತ್ರೆ ಸಮೀಪವೇ ಈ ಸ್ಕ್ಯಾನಿಂಗ್ ಸೆಂಟರ್‌ಗಳು ಇದ್ದು, ಉಪವಿಭಾಗಾಧಿಕಾರಿ ನಂದೀಶ್ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬೆಟ್ಟಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಿ ಸೀಜ್ ಮಾಡಲಾಗಿದೆ. ಇದನ್ನೂ ಓದಿ: NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!
Advertisement