ಮುಂಬೈ: ಈ ಬಾರಿಯ ಕೆಲ ಐಪಿಎಲ್ (IPL) ಪಂದ್ಯಗಳು ಶ್ರೀಲಂಕಾದಲ್ಲಿ (Sri Lanka) ನಡೆಯುತ್ತಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.
ಬಿಸಿಸಿಐ (BCCI) ಮುಂದೆ ಶ್ರೀಲಂಕಾ ಕ್ರೀಡಾ ಸಚಿವಾಲಯ (Sri Lanka Sports Ministry) ಇಟ್ಟ ಪ್ರಸ್ತಾಪದಿಂದ ಈ ಪ್ರಶ್ನೆ ಈಗ ಸೃಷ್ಟಿಯಾಗಿದೆ.
Advertisement
ಶ್ರೀಲಂಕಾದ ಕ್ರೀಡಾ ಸಚಿವ ಹರಿನ್ ಫರ್ನಾಂಡೋ ಅವರು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay shah) ಬಳಿ ಕೆಲ ಐಪಿಎಲ್ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲು ವಿನಂತಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: ಮೈಲುಗಲ್ಲು ಸಾಧಿಸುವತ್ತ ಹಿಟ್‌ಮ್ಯಾನ್ – ಕೊಹ್ಲಿಯನ್ನ ಹಿಂದಿಕ್ಕಿ ನಂ.1 ಪಟ್ಟಕ್ಕೇರುತ್ತಾರಾ ರೋಹಿತ್?
Advertisement
Advertisement
ಶ್ರೀಲಂಕಾದಲ್ಲಿ ಐಪಿಎಲ್ ಆಯೋಜನೆ ಬಗ್ಗೆ ಇಲ್ಲಿಯವರೆಗೆ ಬಿಸಿಸಿಐನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ವರದಿಗಳ ಪ್ರಕಾರ ಮಾರ್ಚ್ 22 ರಿಂದ ಐಪಿಎಲ್ ಆರಂಭವಾಗಲಿದೆ. ಎಲ್ಲಾ ಪಂದ್ಯಗಳು ಭಾರತದಲ್ಲೇ ನಡೆಯಲಿದ್ದು, ಜಯ್ ಶಾ ಅವರು ಸರ್ಕಾರಿ ಅಧಿಕಾರಿಗಳು ಮತ್ತು ಭದ್ರತಾ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದ್ದಾರೆ.
Advertisement
ವಿದೇಶದಲ್ಲಿ ಐಪಿಎಲ್ ನಡೆದಿತ್ತು
ಈ ಹಿಂದೆ 2009ರ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಐಪಿಎಲ್‌ಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರದಲ್ಲಿದ್ದ ಯುಪಿಎ ಸರ್ಕಾರ ಹೇಳಿತ್ತು. ಈ ವೇಳೆ ಸಂಪೂರ್ಣ ಐಪಿಎಲ್ ಟೂರ್ನಿಯನ್ನೇ ದಕ್ಷಿಣ ಆಫ್ರಿಕಾಗೆ ಸ್ಥಳಾಂತರಿಸಲಾಗಿತ್ತು. 2021 ಕೋವಿಡ್ (Covid) ಸಮಯದಲ್ಲಿ ಭಾರತದಲ್ಲಿ ಐಪಿಎಲ್ ನಡೆಸುವುದು ಕಷ್ಟವಾಗಿದ್ದರಿಂದ ಟೂರ್ನಿಯನ್ನು ಯುಎಇಗೆ (UAE) ಸ್ಥಳಾಂತರಿಸಲಾಗಿತ್ತು.