ವಾಷಿಂಗ್ಟನ್: 2026ರ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ಇದೇ ಮೊದಲ ಬಾರಿಗೆ ಮೂರು ರಾಷ್ಟ್ರಗಳ ಆತಿಥ್ಯದಲ್ಲಿ ನಡೆಯಲಿದೆ. ಈಗಾಗಲೇ ಫಿಫಾ ಅಧ್ಯಕ್ಷ ಗಿಲಾನಿ ಇನ್ ಫ್ಯಾಂಟಿನೊ 2026ರ ವಿಶ್ವಕಪ್ ಟೂರ್ನಿಗೆ ಸಿದ್ಧತೆಗಳನ್ನು ಆರಂಭಿಸುವಂತೆ ಅಮೆರಿಕ, ಕೆನಡಾ ಮತ್ತು ಮೆಕ್ಸಿಕೊಗೆ ಸೂಚಿಸಿದ್ದಾರೆ.
Advertisement
ಮೂರು ರಾಷ್ಟ್ರಗಳ ಆತಿಥ್ಯದಲ್ಲಿ ನಡೆಯುವುದರಿಂದ ಈ ಬಾರಿ ವಿಶ್ವಕಪ್ ಟೂರ್ನಿಯ ತಂಡಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಈ ಬಾರಿ 32 ರಾಷ್ಟ್ರಗಳಿಂದ 48 ತಂಡಗಳು ಪಾಲ್ಗೊಳ್ಳಲಿದ್ದು, 1994ರ ಫೈನಲಿಸ್ಟ್ ಉತ್ತರ ಅಮೆರಿಕ ತಂಡ ಇದೇ ಮೊದಲ ಬಾರಿ ವಿಶ್ವಕಪ್ ಅಖಾಡಕ್ಕೆ ಇಳಿಯಲಿದೆ. ಇದನ್ನೂ ಓದಿ: ಏಕದಿನ ಕ್ರಿಕೆಟ್‍ನಲ್ಲಿ ದಾಖಲೆಯ 498 ರನ್ ಸಿಡಿಸಿದ ಇಂಗ್ಲೆಂಡ್ – ಮೈದಾನದೆಲ್ಲೆಡೆ ಸಿಕ್ಸರ್, ಬೌಂಡರಿಗಳ ಅಬ್ಬರ
Advertisement
Advertisement
ಅಮೆರಿಕದ 11, ಮೆಕ್ಸಿಕೊದ 3, ಕೆನಡಾದ 2 ಮೈದಾನಗಳಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಒಟ್ಟಾರೆ 80 ಪಂದ್ಯಗಳ ಪೈಕಿ 60 ಪಂದ್ಯಗಳು ಅಮೆರಿಕದಲ್ಲಿ, ಮೆಕ್ಸಿಕೊ ಹಾಗೂ ಕೆನಡಾದಲ್ಲಿ ತಲಾ 10 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಫೈನಲ್, ಸೆಮಿಫೈನಲ್ ಮತ್ತು ಕ್ವಾರ್ಟರ್ ಫೈನಲ್ ಪಂದ್ಯಗಳೂ ಸೇರಿವೆ.