ರಾಯಚೂರು: ತಾಲೂಕಿನ ಹಂಚಿನಾಳ ಕ್ಯಾಂಪ್ ಬಳಿ ಪೆಟ್ರೋಲ್ ಬಂಕ್‌ನಲ್ಲಿ (Petrol Bunk) 10 ರೂ.ಗೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣದ 6 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಹೊಡೆದಾಟದ ದೃಶ್ಯ ಪೆಟ್ರೋಲ್ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ(CCTV Camera) ಸೆರೆಯಾಗಿದೆ. ಜಗಳ ಬಿಡಿಸಲು ಹೋದ ಗಿಲ್ಲೆಸುಗೂರು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೇಘನಾಥ್ (42) ಕೊಲೆಯಾದ ವ್ಯಕ್ತಿ. ಪೆಟ್ರೋಲ್ ಬಂಕ್ ಸಿಬ್ಬಂದಿ ರವಿ, ವೀರೇಶ್, ನರಸಿಂಹ, ಮಾರೆಪ್ಪ, ರಮೇಶ್, ಪ್ರವೀಣ ಬಂಧಿತ ಆರೋಪಿಗಳು ಎನ್ನಲಾಗಿದೆ. ಇದನ್ನೂ ಓದಿ: ಅಮ್ಮನಾಗೋ ಸುಂದರ ಘಳಿಗೆ – 70ರ ದಶಕದ ಸಿನಿಮಾ ಲುಕ್‌ನಲ್ಲಿ ಖುಷಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ
ಮಹೇಶ್, ನಾಗರಾಜ್ ಎಂಬುವವರು ಬಾಟಲಿಯಲ್ಲಿ 110 ರೂ. ಪೆಟ್ರೋಲ್ ಹಾಕಿಸಿಕೊಂಡು 100 ರೂ. ಮಾತ್ರ ಕೊಟ್ಟಿದ್ದು, ಬಳಿಕ ಬಾಕಿ 10 ರೂ.ಗಾಗಿ ಬಂಕ್ ಸಿಬ್ಬಂದಿ ಜೊತೆ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಮೇಘನಾಥ್ ಸ್ಥಳಕ್ಕೆ ಬಂದು ಜಗಳ ಬಿಡಿಸಲು ಮುಂದಾಗಿದ್ದು, ಪೆಟ್ರೋಲ್ ಬಂಕ್ ಸಿಬ್ಬಂದಿ ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದಾರೆ.
ಈ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರು ಜನರನ್ನು ಬಂಧಿಸಿ, ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.ಇದನ್ನೂ ಓದಿ: ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ದುರಂತ – 14 ವರ್ಷದ ವಿದ್ಯಾರ್ಥಿನಿ ಸಾವು
