ಬೀದರ್: ಜಿಲ್ಲೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂದಿಸಿದಂತೆ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು ಗುಂಪುಗಳ ವಿರುದ್ಧವೂ ಎಫ್‍ಐಆರ್ ದಾಖಲಾಗಿದ್ದು ಮೂವರನ್ನು ಬಂಧಿಸಲಾಗಿದೆ.
ಚಾಕುವಿನಿಂದ ಹಲ್ಲೆಗೊಳಗಾದ ಎಂಡಿ ರೌಫ್ ಪರವಾಗಿ ಟೌನ್ ಪೊಲೀಸ್ ಠಾಣೆಯಲ್ಲಿ ಇತೆಶಾಮ್ ಮಹ್ಮದ್ ಅಲಿ ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ಮುಖಂಡ ಫಿರೋಜ್ ಖಾನ್ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 2ನೇ ಬಾರಿ ಸಿಎಂ ಆಗಿ ‘ಬುಲ್ಡೋಜರ್ ಬಾಬಾ’ ಚುಕ್ಕಾಣಿ – ಮೋದಿ, ಬಿಜೆಪಿ ಸಿಎಂಗಳ ಸಮ್ಮುಖದಲ್ಲಿ ಪ್ರಮಾಣವಚನ
ಕಾಂಗ್ರೆಸ್ ಮುಖಂಡ ಫಿರೋಜ್ ಖಾನ್ ಸೇರಿ ಮೂವರ ಬಂಧನ ಮಾಡಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕಡೆ ಮಹಮ್ಮದ್ ರೌಫ್ ವಿರುದ್ಧವೂ ಟೌನ್ ಪೊಲೀಸ್ ಠಾಣೆಯಲ್ಲಿ ಕೌಂಟರ್ ಪ್ರಕರಣ ದಾಖಲಾಗಿದೆ. ಮಹಮ್ಮದ್ ರೌಫ್ ವಿರುದ್ಧ ಕಾಜಮುಖಾನ್ ನೀಡಿದ ದೂರಿನ ಮೇರೆಗೆ ಎಂಡಿ ರೌಫ್, ಇತೆಶಾಮ್, ಅಬೇದ್ ಅಲಿ ಸೇರಿದಂತೆ ನಾಲ್ಕು ಜನರ ವಿರುದ್ಧ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಳೆಯ ವೈಶಮ್ಯದ ಹಿನ್ನೆಲೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಾರ್ವಜನಿಕವಾಗಿ ಎಂಡಿ ರೌಫ್ ಅವರಿಗೆ ಹತ್ತಾರು ಜನರು ಮಾರಣಾಂತಿಕವಾಗಿ ಹಲ್ಲೆ ಮಾಡಿದರು. ಮಾರಣಾಂತಿಕ ಹಲ್ಲೆಯಿಂದ ಸ್ಥಿತಿ ಗಂಭೀರವಾಗಿದ್ದು, ಹೈದ್ರಾಬಾದ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಡಿ ರೌಫ್ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಇಂದಿನಿಂದ ಐಪಿಎಲ್ ಆರಂಭ – ಅತಿ ಹೆಚ್ಚು ರನ್ ಸಿಡಿಸಿದದ ಟಾಪ್ ತಂಡಗಳು