ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‍ಡಿ ದೇವೇ ಗೌಡ ಅವರ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿದೆ.
ಹಾಸನದ ಚನ್ನರಾಯಪಟ್ಟಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿದರೂ ಕಾರ್ಯಕರ್ತರ ಮುನಿಸು ಮುಗಿದಿಲ್ಲ. ಪಟ್ಟಣದ 17ನೇ ವಾರ್ಡ್ ನಲ್ಲಿ ಶನಿವಾರ ರಾತ್ರಿ ಎರಡೂ ಪಕ್ಷದ ಕಾರ್ಯಕರ್ತರು ಕ್ಲುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಪರಸ್ಪರ ಕಿತ್ತಾಡಿಕೊಂಡಿದ್ದಾರೆ.
ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಖಾಸಿಂ, ನಸ್ರುಲ್ಲಾ ಮತ್ತು ಮುಬಾರಕ್ ಅವರನ್ನು ಕೂಡಲೇ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಘಟನೆಯಿಂದಾಗಿ ಬಾಗೂರು ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿರ್ಮಾಣವಾಗಿದ್ದು, ಚನ್ನರಾಯಪಟ್ಟಣ ನಗರ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv