ಮಂಗಳೂರು: ನಗರದಲ್ಲಿ ಆಯೋಜಿಸಿದ್ದ ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣೆಯ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲೇ ಸ್ವ-ಪಕ್ಷೀಯ ಕಾರ್ಯಕರ್ತರೇ ಹೊಡೆದಾಡಿಕೊಂಡಿದ್ದಾರೆ.
ನಗರದ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕ್ವಿಟ್ ಇಂಡಿಯಾ ಚಳವಳಿ ಸ್ಮರಣೆಯ ಕಾರ್ಯಕ್ರಮಕ್ಕೆ ಮಾಜಿ ಸಚಿವ ರಮಾನಾಥ ರೈ ಮತ್ತು ಐವನ್ ಡಿಸೋಜ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು. ಈ ವೇಳೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮತ್ತು ಐವನ್ ಡಿಸೋಜ ಬೆಂಬಲಿಗರ ನಡುವೆ ರಾಜಕೀಯ ವೈಷಮ್ಯದಿಂದಾಗಿ ಸಭೆಯಲ್ಲೇ ಮಾತಿನ ಚಕಮಕಿ ಏರ್ಪಟ್ಟಿದೆ.
ಸಭೆಯ ಮಧ್ಯೆಯೇ ಎರಡು ಬಣಗಳ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು, ಹೊಡೆದಾಡಿಕೊಂಡಿದ್ದಾರೆ. ಅಲ್ಲದೇ ಐವನ್ ಡಿಸೋಜ ಜೊತೆಗೆ ಗುರುತಿಸಿಕೊಂಡಿದ್ದ ಪುನೀತ್ ಶೆಟ್ಟಿ ಮೇಲೆ ಮಿಥುನ್ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಯುತ್ತಿದ್ದಂತೆ ಸ್ವತಃ ಐವನ್ ಡಿಸೋಜ ಹೋಗಿ ತನ್ನ ಆಪ್ತನನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಅಪ್ಪಂದಿರ ಹೆಸರಲ್ಲಿ ಶಾಸಕ ಮೊಯ್ದಿನ್ ಬಾವಾ, ಅಭಯ್‍ಚಂದ್ರ ಜೈನ್ ನಡುಬೀದಿಯಲ್ಲಿ ಕಿತ್ತಾಟ- ವಿಡಿಯೋ ನೋಡಿ
ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆದರೆ ಸ್ಥಳದಲ್ಲಿ ಪೊಲೀಸರು ಹಾಗೂ ಮಾಜಿ ಸಚಿವ ರಮಾನಾಥ ರೈ ಮತ್ತು ಐವನ್ ಡಿಸೋಜರ ಸಮ್ಮುಖದಲ್ಲೇ ಹೊಡೆದಾಡಿಕೊಂಡಿದ್ದು, ಮುಖಂಡರುಗಳ ಮುಜುಗರಕ್ಕೆ ಕಾರಣವಾಯಿತು.
https://www.youtube.com/watch?v=Ik3cWGc4si8
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews