ಮೈಸೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿ ಪಕ್ಷದ ನಡುವೆ ಮಹಾನಗರ ಪಾಲಿಕೆಯ ಮೇಯರ್ ಪಟ್ಟಕ್ಕಾಗಿ ಕಿತ್ತಾಟ ಜೋರಾಗಿ ನಡೆಯುತ್ತಿರುವ ಕುರಿತು ಮಾಹಿತಿ ಲಭಿಸಿದೆ.
ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಗುದ್ದಾಟ ಏರ್ಪಟ್ಟಿದ್ದು, ಮೇಯರ್ ಸ್ಥಾನ ತಮಗೆ ಸಿಗದೆ ಇದ್ದರೆ, ಕಾಂಗ್ರೆಸ್ ಜೊತೆ ಮೈತ್ರಿಯೇ ಇಲ್ಲ. ಒಂದು ವೇಳೆ ಮೇಯರ್ ಸ್ಥಾನ ಸಿಗದಿದ್ದರೆ, ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸುತ್ತೇವೆ ಎನ್ನುವ ಚರ್ಚೆ ಸ್ಥಳೀಯ ಜೆಡಿಎಸ್ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ.
Advertisement
ಜೆಡಿಎಸ್‍ಗೆ ಟಾಂಗ್ ನೀಡಿರುವ ಕಾಂಗ್ರೆಸ್, ಯಾವುದೇ ಕಾರಣಕ್ಕೂ ಮೇಯರ್ ಸ್ಥಾನ ಬಿಟ್ಟು ಕೊಡಲ್ಲ. ಮೇಯರ್ ಸ್ಥಾನ ಸಿಗದೆ ಇದ್ದರೆ, ವಿಪಕ್ಷ ಸ್ಥಾನದಲ್ಲಿ ಕೂರುತ್ತೇವೆ. ಅಲ್ಲದೇ ಜೆಡಿಎಸ್‍ಗೆ ಮೇಯರ್ ಸ್ಥಾನ ಬಿಟ್ಟು ಕೊಡಬೇಡಿ ಎಂದು ಸಿದ್ದರಾಮಯ್ಯ ಸ್ಥಳೀಯ ಮುಖಂಡರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
Advertisement
Advertisement
ಹೀಗಾಗಿ ಮೈಸೂರು ಪಾಲಿಕೆಯಲ್ಲಿ ಮತ್ತೊಮ್ಮೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ದೋಸ್ತಿ ಖಚಿತವಾಗುತ್ತೆ ಎಂದು ಹೇಳಲಾಗುತ್ತಿದೆ. ಇದೇ ತಿಂಗಳ ಮೂರನೇ ತಾರೀಖಿನಂದು ಪ್ರಕಟಗೊಂಡ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಅತಂತ್ರ ಫಲಿತಾಂಶ ಹೊರಬಿದ್ದಿತ್ತು. ಯಾವುದೇ ಪಕ್ಷಗಳು ಬಹುಮತ ಪಡೆಯದ ಕಾರಣ, ಮೈತ್ರಿಯೊಂದಿಗೆ ಅಧಿಕಾರ ಹಿಡಿಯುವ ಅನಿವಾರ್ಯ ಸೃಷ್ಟಿಯಾಗಿತ್ತು.
Advertisement
ಈ ಮೊದಲು ಜೆಡಿಎಸ್ ವರಿಷ್ಠ ದೇವೇಗೌಡರು ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯೊಂದಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಹೇಳಿದ್ದರು. ಆದರೆ ಈಗ ಸ್ಥಳೀಯ ಮುಖಂಡರ ಮೇಯರ್ ಸ್ಥಾನಕ್ಕಾಗಿನ ಕಿತ್ತಾಟ ಮೈತ್ರಿಗೂ ಮೊದಲೇ ಮುರಿದು ಬೀಳುವ ಹಂತ ತಲುಪಿದೆ ಎಂದು ಹೇಳಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv