ರಾಮನಗರ: ವಿಧಾನಸಭಾ ಉಪಚುನಾವಣೆಗೆ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದಕ್ಕೆ ಪಕ್ಷದ ಕಾರ್ಯಕರ್ತರೇ ಭಾರೀ ಆಕ್ರೋಶ ಹೊರಹಾಕಿದ್ದಾರೆ. ಅವರಿಗೆ ನಾಯಕತ್ವದ ಗುಣವೇ ಇಲ್ಲ, ಸ್ಥಳೀಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ದೂರಿದ್ದಾರೆ.
ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಎಚ್.ಡಿ.ಕುಮಾರಸ್ವಾಮಿ ಅನಿತಾ ಅವರು ಅಭ್ಯರ್ಥಿಯಾಗಲು ಸಮ್ಮತಿಸಿದ್ದಾರೆ. ಹೀಗಾಗಿ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧೆಗೆ ಇಳಿಯಲಿದ್ದಾರೆ ಅಂತಾ ಮುಖಂಡರು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಇದಕ್ಕೆ ಕಾರ್ಯಕರ್ತರು ಅಸಮಾಧಾನ ಹೊರಹಾಕಿದರು. ಈ ವೇಳೆ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.
Advertisement
Advertisement
ಈ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ರಾಜಶೇಖರ್, ಈ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕೆ ನಿಲ್ಲಿಸಲು ಪಕ್ಷದ ಹಿರಿಯರು ತೀರ್ಮಾನ ಕೈಗೊಂಡಿದ್ದಾರೆ. ಅಕ್ಟೋಬರ್ 11ರ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಲ್ಲಿದ್ದಾರೆ ಎಂದು ತಿಳಿಸಿದರು. ಇದನ್ನು ಓದಿ: ನಾನೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಇನ್ನೆರಡು ದಿನದಲ್ಲಿ ಅಂತಿಮ: ಅನಿತಾ ಕುಮಾರಸ್ವಾಮಿ
Advertisement
ಈ ಸಂದರ್ಭದಲ್ಲಿ ಅಲ್ಲಿದ್ದ ಕಾರ್ಯಕರ್ತರು, ಯಾರನ್ನು ಕೇಳಿ ಅನಿತಾ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ? ಅವರು ಬಂದು ನಾನೇ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರಾ ಎಂದು ಪ್ರಶ್ನಿಸಿ ಕಾರ್ಯಕರ್ತರು ರಾಜಶೇಖರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಅಷ್ಟೇ ಅಲ್ಲದೇ ಕ್ಷೇತ್ರದಲ್ಲಿ ಪ್ರಬಲ ಎದುರಾಳಿ ಇಲ್ಲ ಎನ್ನುವ ಕಾರಣಕ್ಕೆ ಇಂತಹ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ದೂರಿದರು.
Advertisement
ರಾಮನಗರಲ್ಲಿ ಪಕ್ಷದ ಕಚೇರಿಯಿಲ್ಲ. ಆದರೂ ಪಕ್ಷದ ಸಭೆಯನ್ನು ಕಾರ್ಯಕರ್ತರು ತಮ್ಮ ಮನೆಯನ್ನು ನೀಡುತ್ತಾರೆ. ಅಷ್ಟೇ ಅಲ್ಲದೆ ಅವರು ತಮ್ಮ ಹಣದಲ್ಲಿಯೇ ಚುನಾವಣೆಯ ವೆಚ್ಚವನ್ನು ನೋಡಿಕೊಳ್ಳುತ್ತಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಜಿಲ್ಲೆಗೆ ಬಂದರೆ ಕೇವಲ ನಾಲ್ಕು ಜನರ ಹಿಂದೆ ಓಡಾಡುತ್ತಿದ್ದು, ಸ್ಥಳೀಯ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ನಮ್ಮ ಸಮಸ್ಯೆಗಳನ್ನು ತೆಗೆದುಕೊಂಡು ಬೆಂಗಳೂರಿಗೆ ಹೋದರೆ ಅಲ್ಲಿಯೂ ನಮ್ಮನ್ನು ಮಾತನಾಡಿಸುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಮ್ಮಿಶ್ರ ಸರ್ಕಾರದ ಜವಾಬ್ದಾರಿಗಳಿವೆ. ಆದರೆ ಅನಿತಾ ಕುಮಾರಸ್ವಾಮಿ ಅವರು ಖಾಲಿಯಿದ್ದರೂ ಕ್ಷೇತ್ರಕ್ಕೆ ಒಂದು ದಿನವೂ ಬಂದು ಕಾರ್ಯಕರ್ತರ ಜೊತೆಗೆ ಚರ್ಚೆ ಮಾಡಿಲ್ಲ. ನಾಮಪತ್ರ ಸಲ್ಲಿಸಲು ಇನ್ನೂ ಸಮಯವಿದೆ. ಹೀಗಿರುವಾಗ ಪಕ್ಷದ ವರಿಷ್ಠರು ಯಾವ ನಿರ್ಧಾರಕ್ಕೆ ಬರುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಪಕ್ಷದಲ್ಲಿ ಭಾರೀ ಗೊಂದಲವಿದೆ. ಮುಸ್ಲಿಮರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂದು ದೂರಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://youtu.be/HAaUXB4ushw