BelgaumCrimeDistrictsKarnatakaLatestMain Post

ಬೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ

ಬೆಳಗಾವಿ: ಬೀಮ್ಸ್ ಕಾಲೇಜಿನ ಚುನಾವಣೆ ವಿಚಾರವಾಗಿ ಹಾಸ್ಟೆಲ್‍ನಲ್ಲಿ ನಡೆದ ಗಲಾಟೆ ಜೋರಾಗಿದ್ದು, ವಿದ್ಯಾರ್ಥಿಗಳ ಮಧ್ಯೆಯೇ ಮಾರಾಮಾರಿಯಾಗಿದೆ. ಘಟನೆಗೆ ಸಂಬಂಧಿಸಿ 15 ವಿದ್ಯಾರ್ಥಿಗಳ ಮೇಲೆ ಎಫ್‍ಐಆರ್ ದಾಖಲಾಗಿದೆ.

ನಗರದ ಬೀಮ್ಸ್ ಕಾಲೇಜಿನಲ್ಲಿ ಮೆಡಿಕಲ್ ವಿದ್ಯಾರ್ಥಿಗಳು ಕಾಲೇಜು ಚುನಾವಣಾ ವಿಷಯಕ್ಕೆ ಗಲಾಟೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗಲಾಟೆಯಲ್ಲಿ ಎಂಬಿಬಿಎಸ್ ನಾಲ್ಕನೇ ವರ್ಷದ ವಿದ್ಯಾರ್ಥಿಗಳು ರಾಜಸ್ತಾನ ಮೂಲದ ವಿದ್ಯಾರ್ಥಿ ಬುರಾರಾಮ್ ಗೋಧರೆ ಎಂಬವರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ.

crime

ತೀವ್ರ ಹಲ್ಲೆಗೆ ಒಳಗಾಗಿದ್ದ ಬುರಾರಾಮ್ ಅವರ ಮೂಗು, ಕಿರುಬೆರಳಿಗೆ ಗಾಯವಾಗಿದ್ದು, ಮೂಗಿನ ಶಸ್ತ್ರ ಚಿಕಿತ್ಸೆಗೆ ರಾಜಸ್ತಾನದ ಏಮ್ಸ್ ಜೋಧಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕಾಲೇಜಿನಲ್ಲಿ ಗಲಾಟೆ ಆಗಿರುವ ಸಂಬಂಧ ಬಿಮ್ಸ್ ಆಡಳಿತಾಧಿಕಾರಿಯಿಂದ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇದನ್ನೂ ಓದಿ: ಕೆಲಸದಲ್ಲಿ ತೃಪ್ತಿ ಇಲ್ಲ – ಡೆತ್ ನೋಟ್ ಬರೆದು ಪೊಲೀಸ್ ಆತ್ಮಹತ್ಯೆ

ದೂರಿನ ಮೇರೆಗೆ 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದ್ದು, ಕಾಲೇಜು ಹಾಸ್ಟೆಲ್ ನಿಂದ 15 ವಿದ್ಯಾರ್ಥಿಗಳನ್ನು ತೆಗೆದುಹಾಕಲಾಗಿದೆ. ಇದನ್ನೂ ಓದಿ: 2 ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ

Leave a Reply

Your email address will not be published.

Back to top button