ಬೆಂಗಳೂರು: ಕುಡಿದ ಮತ್ತಿನಲ್ಲಿ ಚಿಂದಿ ಆಯುವವರ ನಡುವೆ ಜಗಳವಾಗಿ ಮಗೇಶ್ ಎಂಬಾತನ ತಲೆಗೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿರುವ ಘಟನೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಘಟನೆಯಲ್ಲಿ ಮಗೇಶನ ಮೇಲೆ ಆದ ಹಲ್ಲೆಯಿಂದ ವಿಪರೀತ ರಕ್ತಸ್ರಾವವಾಗಿ ರಸ್ತೆಯಲ್ಲಿ ಒದ್ದಾಡ್ತಾ ಇದ್ದ. ಇದನ್ನು ಅರಿತ ಸ್ಥಳೀಯರು ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಗೇಶ್‍ಗೆ ವಿಪರೀತ ರಕ್ತಸ್ರಾವವಾಗುತ್ತಿರುವುದನ್ನ ಕಂಡ ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದ್ರೆ ಘಟನೆ ನಡೆದು ಒಂದು ಗಂಟೆಯಾದ್ರೂ ಅಂಬುಲೆನ್ಸ್ ಬರಲೇ ಇಲ್ಲ.
ಮಾನವೀಯತೆ ಮೆರೆದ ಬೀಟ್ ಪೊಲೀಸರು ಮತ್ತು ಆಟೋ ಚಾಲಕರು ಹಲ್ಲೆಗೊಳಗಾದ ವ್ಯಕ್ತಿಯನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಸಂಬಂಧ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ