LatestDavanagereDistrictsKarnatakaMain Post

ಜಮೀನು ವಿವಾದ ಎರಡು ಗ್ರಾಮಗಳ ನಡುವೆ ಮಾರಾಮಾರಿ

ದಾವಣಗೆರೆ: ಜಮೀನು ವಿವಾದ ಹಿನ್ನೆಲೆ ಎರಡು ಗ್ರಾಮಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದೊಣ್ಣೆ, ಕುಡುಗೋಲುಗಳಿಂದ ಪರಸ್ಪರವಾಗಿ ಸಿನಿಮೀಯ ರೀತಿ ಹಲ್ಲೆ ನಡೆಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕಂಚಿಕೊಪ್ಪ ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ನಡುವೆ ಮಾರಾಮಾರಿಯಾಗಿದೆ. ಕಂಚಿಕೊಪ್ಪ ಗ್ರಾಮದ 30 ದಲಿತ ಕುಟುಂಬಗಳು ತುಗ್ಗಲಹಳ್ಳಿ ಗ್ರಾಮದ ಬಳಿ ಇರುವ ಸರ್ವೇ ನಂಬರ್ 29- 30 ರಲ್ಲಿ 40 ಎಕರೆ ಜಮೀನನಲ್ಲಿ ಉಳುಮೆ ಮಾಡುತ್ತಿದ್ದು, ಸಾಗುವಳಿ ಚೀಟಿ, ಪಹಣೆ ಕೂಡ ನೀಡಲಾಗಿದೆ. ಇದನ್ನೂ ಓದಿ: ಸ್ಕೂಟರ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ದೊಡ್ಡ ರಸ್ತೆ ಗುಂಡಿಗೆ ಬಿದ್ದ ವಿದ್ಯಾರ್ಥಿನಿಯರು!

 Davanagere

ಈ ಜಮೀನು ಖಾತೆ ಮಾಡಿಕೊಡುವಂತೆ ಕಂಚಿಕೊಪ್ಪ ಗ್ರಾಮದ ದಲಿತ ಕುಟುಂಬಗಳು ಕೋರ್ಟ್ ಮೊರೆ ಹೋಗಿದ್ದವು. ಆದರೆ ಇದೇ ಸಂದರ್ಭದಲ್ಲಿ ತುಗ್ಗಲಹಳ್ಳಿ ಗ್ರಾಮದ ಕೆಲವರು ದಲಿತರು ಉಳುಮೆ ಮಾಡುತ್ತಿರುವ ಜಮೀನು ನಮಗೆ ಸೇರಿದ್ದು ಎಂದು ತಕರಾರು ತೆಗೆದಿದ್ದಾರೆ. ಬಳಿಕ ಬುಧವಾರ ಸಂಜೆ ಏಕಾಏಕಿ ಜಮೀನಿನಲ್ಲಿದ್ದ ಬೆಳೆಯನ್ನು ನಾಶ ಮಾಡಿದ್ದರು. ಇದರಿಂದ ಮಾತಿನ ಚಕಮಕಿಯಾಗಿ ನಡೆದಿದ್ದು, ನಂತರ ಎರಡು ಗ್ರಾಮದವರು ಕುಡಗೋಲು, ದೊಣ್ಣೆಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಗೃಹ ಸಚಿವರಿಗೆ ಒಂದೇ ವರ್ಷದಲ್ಲಿ ಎರಡು ಬಾರಿ ಕೊರೊನಾ ಪಾಸಿಟಿವ್

 Davanagere

ಹಲ್ಲೆಗೊಳಗದ ಕಂಚಿಕೊಪ್ಪದ 13 ಜನರು ಆಸ್ಪತ್ರೆಗೆ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಹೊನ್ನಾಳಿ ಸಿಪಿಐ ದೇವರಾಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೂ ಹಲ್ಲೆಗೊಳಗಾದವರಿಂದ ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತುಗ್ಗಲಹಳ್ಳಿ ಗ್ರಾಮದ ಇಬ್ಬರನ್ನು ಹೊನ್ನಾಳಿ ಪೊಲೀಸರು ಬಂಧಿಸಿದ್ದಾರೆ.

Related Articles

Leave a Reply

Your email address will not be published. Required fields are marked *