ಕೋಲ್ಕತ್ತಾ: ಡಿಜೆ (DJ) ನಿಲ್ಲಿಸಿದ್ದಕ್ಕಾಗಿ ಜಗಳ ನಡೆದು, ಟಿಎಂಸಿ ನಾಯಕನನ್ನು (TMC leader) ಹೊಡೆದು ಬರ್ಬರವಾಗಿ ಕೊಂದಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಮಾಲ್ಡಾದಲ್ಲಿ (Malda) ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 14 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತೃಣಮೂಲ ನಾಯಕ ಅಫ್ಜಲ್ ಮೊಮಿನ್ (Afzal Momin) ಕೊಲೆಯಾದ ವ್ಯಕ್ತಿ. ಇವರು ಕೈಲಾಶ್ಜಿ ಬ್ಲಾಕ್ನ ರಥ ಬರಿ ಗ್ರಾಮ ಪಂಚಾಯತ್ನ ಉಪ ಮುಖ್ಯಸ್ಥರಾಗಿದ್ದರು. ಗ್ರಾಮದಲ್ಲಿ ಕೆಲ ಯುವಕರು ಜೋರಾಗಿ ಡಿಜೆ ಹಾಕಿ, ಡ್ಯಾನ್ಸ್ ಮಾಡುತ್ತಾ ಗಲಾಟೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ವರದಿಗಳ ಪ್ರಕಾರ ಮಂಗಳವಾರ ಬೆಳಗ್ಗೆ ಯುವಕರು ಡಿಜೆ ಬಾರಿಸುತ್ತಿದ್ದರು. ಇದನ್ನು ನಿಲ್ಲಿಸುವಂತೆ ಗ್ರಾಮಸ್ಥರು ಕೇಳಿಕೊಂಡಾಗ ಯುವಕರು ಒಪ್ಪಿದ್ದರು. ಆದರೆ ಯುವಕರು ರಾತ್ರಿ ವೇಳೆಯೂ ಜೋರಾಗಿ ಡಿಜೆ ಹಾಕಿದ್ದಕ್ಕೆ ಗ್ರಾಮಸ್ಥರು ಯುವಕರೊಂದಿಗೆ ಜಗಳ ನಡೆಸಿದ್ದಾರೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ- ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ 6 ಭಕ್ತರು ಸಾವು
Advertisement
ಈ ವೇಳೆ ಡಿಜೆ ನಿಲ್ಲಿಸಿದ್ದಕ್ಕಾಗಿ ಯುವಕರು ಅಫ್ಜಲ್ ಮೋಮಿನ್ ಅವರನ್ನು ಮನಬಂದಂತೆ ಥಳಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮೋಮಿನ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
Advertisement
ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 14 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಇಂದು ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ವಿಸರ್ಜನೆ- ಭಕ್ತರಿಗೆ ಕೊಡಲ್ಲ ಪೂಜ್ಯರ ಚಿತಾಭಸ್ಮ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k