ರಾಯಚೂರು: ಅಪೌಷ್ಟಿಕತೆಯಿಂದ ತಾಂಡವವಾಡುತ್ತಿದ್ದ ಜಿಲ್ಲೆ ಈಗ ಪೌಷ್ಟಿಕತೆ ವಿಚಾರದಲ್ಲಿ ಪ್ರಗತಿ ಕಾಣುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
Advertisement
Advertisement
ನೀತಿ ಆಯೋಗದ ಸಭೆಯಲ್ಲಿ ರಾಯಚೂರು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ ಮೋದಿ ಹಾಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್‌ರನ್ನೂ ಶ್ಲಾಘಿಸಿದ್ದಾರೆ. 70% ಇದ್ದ ಪೌಷ್ಟಿಕತೆ ಈಗ 97% ರಷ್ಟು ತಲುಪಿದೆ. ಮಹತ್ವಾಕಾಂಕ್ಷೆ ಯೋಜನೆಯಡಿ ಒಳ್ಳೆ ಕೆಲಸಗಳನ್ನು ಮಾಡುವಂತೆ ಪ್ರಧಾನಿ ಮೋದಿ ಕರೆ ನೀಡಿದರು. ಇದನ್ನೂ ಓದಿ: ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ
Advertisement
आकांक्षी जिलों में मिली सफलताओं को देखते हुए देश ने अब अपने लक्ष्यों का और विस्तार किया है… pic.twitter.com/LGFUC7Rn9B
— Narendra Modi (@narendramodi) January 22, 2022
Advertisement
ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲಾಡಳಿತವನ್ನು ಶ್ಲಾಘಿಸಿದ್ದಾರೆ. ರಾಯಚೂರು ಜಿಲ್ಲೆ ಅಪೌಷ್ಟಿಕತೆ ವಿಚಾರದಲ್ಲಿ ಗಂಭೀರ ಸಮಸ್ಯೆಯನ್ನ ಎದುರಿಸುತ್ತಿದ್ದು , 5 ವರ್ಷ ಒಳಗಿನ ಮಕ್ಕಳ ಸಾವಿನ ಸಂಖ್ಯೆ ಈಗಲೂ ಹೆಚ್ಚಿದೆ. ಹಿಂದಿಗಿಂತಲೂ ಪೌಷ್ಠಿಕತೆಯಲ್ಲಿ ಜಿಲ್ಲೆ ಈಗ ಅಭಿವೃದ್ಧಿ ಸಾಧಿಸಿರುವ ಹಿನ್ನೆಲೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತ ವಿರೋಧಿ ಸುಳ್ಳು ಸುದ್ದಿ ಪ್ರಚಾರ- 19 ಯೂಟ್ಯೂಬ್ ಚಾನೆಲ್ ಬಂದ್