ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಯಶಸ್ಸಿನ ನಂತರ ಇಂಥದ್ದೇ ಮಾದರಿಯ ಚಿತ್ರಗಳು ಭಾರತೀಯ ಸಿನಿಮಾ ರಂಗದಲ್ಲಿ ಸದ್ದು ಮಾಡುತ್ತಿವೆ. ಅದರಲ್ಲೂ ‘ಫೈಲ್ಸ್’ ಹೆಸರಿನಲ್ಲಿ ನಾನಾ ಭಾಷೆಗಳಲ್ಲಿ ಚಿತ್ರಗಳು ತಯಾರಾಗುತ್ತಿವೆ. ಅದಕ್ಕೆ ಹೊಸ ಸೇರ್ಪಡೆ ‘ದಿ ಭವಾನಿ ಫೈಲ್ಸ್’ (The Bhavani Files) ಕನ್ನಡದಲ್ಲೂ ಫೈಲ್ಸ್ ಮಾದರಿಯ ಚಿತ್ರವೊಂದು ತಯಾರಾಗುತ್ತಿದ್ದು, ಈ ಚಿತ್ರಕ್ಕೆ ಈಗಾಗಲೇ ಚಾಲನೆ ಕೂಡ ಸಿಕ್ಕಿದೆ.
Advertisement
ನೂರು ಜನ್ಮಕ್ಕೂ, ಡಿಯರ್ ಸತ್ಯ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಪ್ರತಿಭಾನ್ವಿತ ನಾಯಕ ಆರ್ಯನ್ (Aryan). ಇದೀಗ ಆರ್ಯನ್ ದಿ ಭವಾನಿ ಫೈಲ್ಸ್ ಎಂಬ ಹೊಸ ಸಿನಿಮಾ ಘೋಷಿಸಿದ್ದು, ಈ ಚಿತ್ರದಲ್ಲಿ ನಟನೆ ಜೊತೆಗೆ ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈ ಚಿತ್ರಕ್ಕೆ ದೊಡ್ಮನೆ ಸೊಸೆ ಸಾಥ್ ಕೊಟ್ಟಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಸೆಡ್ಡು ಹೊಡೆದ ನಟಿ- ಐಕಾನ್ ಸ್ಟಾರ್‌ಗೆ ಶ್ರೀಲೀಲಾ ನಾಯಕಿ
Advertisement
Advertisement
ದಿ ಭವಾನಿ ಫೈಲ್ಸ್ ಸಿನಿಮಾದ ಟೈಟಲ್ (Title)ಲಾಂಚ್ ಮಾಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneet Rajkumar) ಶುಭ ಹಾರೈಸಿದ್ದಾರೆ. ಸದ್ಯ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಮುಂದಿನ ತಿಂಗಳು ಫಸ್ಟ್ ಲುಕ್ ಲಾಂಚ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. 14ನೇ ಶತಮಾನದ ಕಥೆಯನ್ನು ಆರ್ಯನ್ ತಮ್ಮ ಸ್ನೇಹಿತರ ಜೊತೆಗೂಡಿ ನಿರ್ದೇಶಿಸುತ್ತಿದ್ದಾರೆ.
Advertisement
ಮೋಹನ್ ಮೆನನ್, ಜೇಕಬ್ ವರ್ಗೀಸ್ ಹಾಗೂ ಆರ್ಯನ್ ಸಿನಿಮಾಗೆ ಚಿತ್ರಕಥೆ ಬರೆದಿದ್ದು, ಚೇತನ್ ಡಿಕ್ರೋಸ್ ಸ್ಟಂಟ್, ಜೋ ಕೋಸ್ಟ್ ಟ್ಯೂನ್ ಹಾಕಿದ್ದಾರೆ. ವೈಟ್ ಹಾರ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ದಿ ಭವಾನಿ ಫೈಲ್ಸ್ ಸಿನಿಮಾವನ್ನು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ನಿರ್ಮಾಣದಲ್ಲಿ ಸಾಥ್ ಕೊಡಲಿದೆ. ಕಲ್ಟ್ ಜಾನರ್ ಈ ಸಿನಿಮಾದ ಉಳಿದ ಸ್ಟಾರ್ ಕಾಸ್ಟ್ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಮಾಹಿತಿ ನೀಡಲಿದೆ.