ನಟ, ನಿರ್ಮಾಪಕ, ನಿರ್ದೇಶಕ ಮಾಸ್ಟರ್ ಆನಂದ್‌ಗೆ (Master Anand) ವಂಚನೆಯಾಗಿದೆ. ನಿವೇಶನ ನೀಡೋದಾಗಿ ಮಲ್ಟಿ ಲೀಪ್ ವೆಂಚರ್ಸ್ (Multi Leap Ventures )ಹೆಸರಿನ ಕಂಪನಿಯು ಆನಂದ್ ಅವರಿಗೆ 18.50 ಲಕ್ಷ ರೂಪಾಯಿ ವಂಚನೆ (Fraud) ಮಾಡಿದೆ ಎಂದು ಕಂಪನಿ ವಿರುದ್ದ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.
Advertisement
ಬೆಂಗಳೂರಿನ ಕೊಮ್ಮಘಟ್ಟದ ರಾಮಸಂದ್ರ ಗ್ರಾಮದಲ್ಲಿ ನಿವೇಶನ ನೀಡುವುದಾಗಿ ಕಂಪೆನಿಯು ಹೇಳಿತ್ತು. ಮನಿಕಾ ಕೆಂ.ಎಂ ಇಂದ ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರುವುದಾಗಿಯೂ ಅದು ಹೇಳಿತ್ತು. ಕಂಪನಿ ಮಾತು ಕೇಳಿಕೊಂಡು ಮಾಸ್ಟರ್ ಆನಂದ್ ಸೈಟ್ ಖರೀದಿಸಿದ್ದರು. ಆದರೆ, 2020 ರ ಸೆಪ್ಟಂಬರ್ ನಿಂದ 2021 ರ ಅಕ್ಟೋಬರ್ ನ ಅವಧಿಯಲ್ಲಿ ಕಂಪನಿ ತನ್ನನ್ನು ವಂಚಿಸಿದೆ ಎಂದು ಗೊತ್ತಾಗಿದೆ. ಇದನ್ನೂ ಓದಿ: ಕಿಚ್ಚ ಸುದೀಪ್ ಕುಟುಂಬದಿಂದ ಸ್ಯಾಂಡಲ್‌ವುಡ್‌ಗೆ ಮತ್ತೊಬ್ಬ ಸ್ಟಾರ್ ಎಂಟ್ರಿ
Advertisement
Advertisement
ಮನಿಕಾ ಕೆಂ ಎಂ ಇಂದ ನಿವೇಶನ (Site) ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಹೇಳಿದ್ದರಿಂದ ಮಾಸ್ಟರ್ ಆನಂದ್ ಆ ಬಳಿಕ ರಾಮಸಂದ್ರದ 2000 ಅಡಿ ವಿಸ್ತೀರ್ಣದ ನಿವೇಶನ ತೋರಿಸಿದ್ದ ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ನಿವೇಶನವನ್ನು ಖರೀದಿಸಿದ್ದರು. ಮೊದಲು 70 ಲಕ್ಷ ರೂಪಾಯಿಗೆ ಸೈಟ್ ಖರೀದಿ ಒಪ್ಪಂದವಾಗಿ ಹಂತ ಹಂತವಾಗಿ 18.5 ಲಕ್ಷ ರೂಪಾಯಿ ಮುಂಗಡ ಹಣ ಮಾಸ್ಟರ್ ಆನಂದ ಕಂಪನಿಗೆ ನೀಡಿದ್ದರು.
Advertisement
ಮಾಸ್ಟರ್ ಆನಂದ್ ಹಾಗು ಪತ್ನಿ ಯಶಸ್ವಿನಿ (Yashasvin) ಹೆಸರಲ್ಲಿ ಖರೀದಿ ಖರಾರು ಪತ್ರವನ್ನೂ ಕಂಪನಿ ಮಾಡಿಕೊಟ್ಟಿತ್ತು. ಈ ನಡುವೆ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿತ್ತು ಕಂಪನಿ. ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣ ಸಹ ವಾಪಸ್ ಮಾಡಿರಲಿಲ್ಲ ಎಂದು ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ. ಬಿಯುಡಿಎಸ್ (ಅನಿಯಂತ್ರಿತ ಉಳಿತಾಯ ಯೋಜನೆಗಳ ನಿಷೇಧ ಕಾಯ್ದೆ ) ಕಾಯ್ದೆ 2019 ರ ಅಡಿ ಆರೋಪಿಗಳ ವಿರುದ್ದ ಎಫ್ ಐ ಆರ್ ದಾಖಲು ಮಾಡಲಾಗಿದೆ.