ಹಾಸ್ಯ ಅರ್ಥವಾಗದ ಹಾಸ್ಯಾಸ್ಪದರೇ… : ಪ್ರಕಾಶ್‌ ರಾಜ್‌ ಮತ್ತೊಂದು ಟ್ವೀಟ್‌

Public TV
2 Min Read
Prakash Raj 2

ಬೆಂಗಳೂರು: ಇತ್ತೀಚೆಗಷ್ಟೇ ಚಂದ್ರಯಾನ-3 (Chandrayaan-3) ಕುರಿತು ಟ್ವೀಟ್‌ ಮಾಡುವ ಮೂಲಕ ವಿವಾದಕ್ಕೆ ಸಿಲುಕಿದ್ದ ಪ್ರಕಾಶ್‌ ರಾಜ್‌ (Prakash Raj) ಮತ್ತೊಂದು ಟ್ವೀಟ್‌ ಮೂಲಕ ಪೇಚಿಗೆ ಸಿಲುಕಿದ್ದಾರೆ.

ಜಸ್ಟ್‌ ಆಸ್ಕಿಂಗ್‌ ಹ್ಯಾಶ್‌ಟ್ಯಾಗ್‌ನೊಂದಿಗೆ, ಮಲಯಾಳಿ ಚಾಯ್‌ವಾಲಾ ಎಲ್ಲಿ ಎಂದು ಇನ್ನೂ ಬಡಬಡಿಸುತ್ತಿರುವ ಹಾಸ್ಯ ಅರ್ಥವಾಗದ ಹಾಸ್ಯಾಸ್ಪದರೆ… ಅವನು ಬುದ್ಧಿವಂತ… ಆತನೀಗ ಮಂಗಳ .. ಶುಕ್ರ ಗ್ರಹಗಳಲ್ಲಿ ಅಂಗಡಿಯಿಟ್ಟಿದ್ದಾನೆ. ಸಾಧ್ಯವಾದರೆ ಹೋಗಿ… ಎಂದು ನೆಟ್ಟಿಗರ ಕಾಲೆಳೆದಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ಭಾರತ – 14 ದಿನಗಳ ನಂತ್ರ ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌ ಕಥೆ ಏನು?

ಪ್ರಕಾಶ್‌ ರೈ ಟ್ವೀಟ್‌ ವಿರುದ್ಧ ನೆಟ್ಟಿಗರು ಮತ್ತೆ ರೊಚ್ಚಿಗೆದ್ದಿದ್ದಾರೆ, ಕೆಲವರು ಸರ್ ಅತೀ ಶೀಘ್ರದಲ್ಲಿ ಭಕ್ತರು ನಿಮ್ಮನ್ನು ರಾಷ್ಟ್ರವಿರೋಧಿ ಎಂದು ಘೋಷಿಸುತ್ತಾರೆ ಎಂದು ಕುಟುಕಿದ್ದಾರೆ.

ಚಂದ್ರಯಾನ-3 ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ‘ಚಾಯ್‌ ವಾಲಾ’ ಫೋಟೋ ಹಾಕಿದ್ದ ಅವರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇಡೀ ದೇಶವೇ ಹೆಮ್ಮೆ ಪಡುವಂತೆ ನಿಮ್ಮ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಜಗತ್ತೇ ಈ ಕೆಲಸಕ್ಕಾಗಿ ಕೊಂಡಾಡುತ್ತಿದೆ. ಆದರೆ ಪ್ರಕಾಶ್ ರಾಜ್‌ ಈ ರೀತಿ ಗೇಲಿ ಮಾಡುವುದು ಸರಿಯಲ್ಲ. ಭಾರತದ ಅಸ್ಮಿತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಪ್ರತಿಕ್ರಿಯಿಸಿದ್ದರು.

prakash raj 1

ಪ್ರಕಾಶ್‌ ರಾಜ್‌ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಹೆಸರಾಂತ ನಟನಾಗಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎನ್ನುವುದನ್ನು ಕಲಿಸಬೇಕಿದೆ ಎಂದರೆ, ಇನ್ನೂ ಕೆಲವರು ಪ್ರಕಾಶ್ ರೈ ಪರವಾಗಿ ಕಾಮೆಂಟ್ ಮಾಡಿದ್ದರು. ಇದನ್ನೂ ಓದಿ: ಪಾಕಿಸ್ತಾನದ ಪತ್ರಿಕೆ, ವೆಬ್‌ಸೈಟ್‌, ಟಿವಿ ಸ್ಕ್ರೀನ್‌ಗಳಲ್ಲಿ ರಾರಾಜಿಸಿದ ಚಂದ್ರಯಾನ-3 ಸಕ್ಸಸ್‌ ಸುದ್ದಿ

ಈ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಪ್ರಕಾಶ್‌ ರಾಜ್‌, ʻದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ. ನಾನು ಉಲ್ಲೇಖಿಸಿದ್ದು ನಮ್ಮ ಕೇರಳದ ಚಾಯ್‌ವಾಲಾರನ್ನ ವಿಜೃಂಭಿಸುವ ಆರ್ಮ್ಸ್ಟ್ರಾಂಗ್ ಕಾಲದ ಜೋಕ್. ಟ್ರೋಲಿಗರ ಕಣ್ಣಿಗೆ ಕಾಣಿಸಿದ ಚಾಯ್‌ವಾಲಾ ಯಾರು? ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ. ಬಾಲಿಶವಾಗಿ ವರ್ತಿಸುವುದನ್ನು ನಿಲ್ಲಿಸಿ’ ಎಂದು ಸ್ಪಷ್ಟನೆ ನೀಡಿದ್ದಾರೆ.

Web Stories

Share This Article