Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ವಾಣಿಜ್ಯ ಮಂಡಳಿ ಚುನಾವಣೆ: ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್.ಎಂ. ಸುರೇಶ್ ಭರವಸೆ ಏನು?

Public TV
Last updated: September 21, 2023 11:16 am
Public TV
Share
3 Min Read
M.N 3
SHARE

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಜಿದ್ದಾಜಿದ್ದಿನ ಕಣದಲ್ಲಿರುವ ಅಭ್ಯರ್ಥಿಗಳು ಮಂಡಳಿಯ ಚುನಾವಣಾ (Election) ರಣಕಣದಲ್ಲಿ ಯುದ್ದಕ್ಕೆ ಸಜ್ಜಾಗಿದ್ದಾರೆ. 2023ರ ಚುನಾವಣೆಯಲ್ಲಿ ಮಂಡಳಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾರುವ ಹಿರಿಯ ನಿರ್ಮಾಪಕ ಎನ್. ಎಂ. ಸುರೇಶ್ (M.N. Suresh)ಸುದ್ದಿಗೋಷ್ಠಿ ನಡೆಸಿ ವಾಣಿಜ್ಯ ಮಂಡಳಿಯ ಶ್ರೇಯೋಭಿವೃದ್ದಿಗೆ ತಮ್ಮ ಯೋಜನೆಗಳನ್ನು ವಿವರಿಸಿದರು. ತಮ್ಮ ನೇತೃತ್ವದ ತಂಡಕ್ಕೆ ಬೆಂಬಲ ಕೇಳುವುದರ ಜೊತೆಗೆ ವಾಣಿಜ್ಯ ಮಂಡಳಿಯ ಸಮಗ್ರ ಅಭಿವೃದ್ದಿಗೆ ಜೊತೆಯಾಗಿ ಎಂದು ಮನವಿ ಮಾಡಿಕೊಂಡರು.  ಸುದ್ದಿಗೋಷ್ಠಿಯ ಆರಂಭದಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸದ್ಯ ಉಂಟಾಗಿರುವ ಸಮಸ್ಯೆಗೆ ತಮ್ಮ ತಂಡದ ಸಂಪೂರ್ಣ ಬೆಂಬಲ ಇದೆ ಎಂದು ಹಿರಿಯ ನಿರ್ಮಾಪಕ ಎನ್ ಎಂ  ಸುರೇಶ್‌ ಘೋಷಿಸಿದರು. ‘ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ಅವರು ಕಾವೇರಿಗಾಗಿ ಹಿಂದೆ ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಈ ಚುನಾವಣಾ ಕಣದಲ್ಲಿರುವ ನಮ್ಮ ತಂಡ, ಸದಾ ಈ ಕನ್ನಡ ನಾಡಿನ ಅಸ್ಮಿತೆಯ ವಿಚಾರಗಳಿಗೆ ಬೆಂಬಲವಷ್ಟೆ ಅಲ್ಲದೆ ಯಾವುದೇ ಹಂತದ ಹೋರಾಟ ಅಥವಾ ತ್ಯಾಗಕ್ಕೆ ಸಿದ್ದರಿದ್ದೇವೆ’ ಎಂದು ಕಾವೇರಿ ಸಮಸ್ಯೆಗೆ ಬಹಿರಂಗ ಬೆಂಬಲ ಘೋಷಿಸಿದರು.

M.N 2 1

ಚುನಾವಣೆ ಎಂದರೆ ಕೇವಲ ಅಧಿಕಾರ ಅಥವಾ ಹುದ್ದೆಯ ನಿರೀಕ್ಷೆಯಷ್ಟೆ ಅಲ್ಲ, 75 ವರ್ಷಗಳ ಇತಿಹಾಸ ಇರುವ ನಮ್ಮ ಕನ್ನಡ ಚಲನಚಿತ್ರೋದ್ಯಮದ ಸಮಗ್ರ ಅಭಿವೃದ್ದಿ, ಆಧುನಿಕತೆ, ತಂತ್ರಜ್ಞಾನ, ಹಾಗೂ ಹಿರಿಯ ಅನುಭವಿಗಳ ಸೂಕ್ತ ಸಲಹೆಗಳೊಂದಿಗೆ ಮಂಡಳಿಯ ಸಮಗ್ರ ಅಭಿವೃದ್ದಿಯನ್ನ ವಾಸ್ತವಿಕವಾಗಿ ಕಟ್ಟಿಕೊಡೋ ಕೆಲಸವಾಗಿದೆ.  30 ವರ್ಷಗಳಿಂದ ಚಿತ್ರೋದ್ಯಮದಲ್ಲಿರುವ ನಾನು ಕೇವಲ ಹುದ್ದೆಯ ಆಕಾಂಕ್ಷಿಯಾಗಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಬದಲಿಗೆ ಈ ಚುನಾವಣೆಯ ಸದಾವಕಾಶವನ್ನು ಬಳಸಿಕೊಂಡು ದಶಕಗಳಿಂದ ಇರುವ ವಾಣಿಜ್ಯ ಮಂಡಳಿಯ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕೆಲಸ ಮಾಡುವ ಸದುದ್ದೇಶ ಹೊಂದಿದ್ದೇವೆ’ ಎಂದು ತಿಳಿಸಿದರು. ಚಿತ್ರರಂಗದ ಹಿರಿಯ ನಿರ್ಮಾಪಕ ಸಾ.ರಾ.ಗೋವಿಂದ್ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನ ದೇಶದದಲ್ಲೇ ಒಂದು ಮಾದರಿ ಮಂಡಳಿಯನ್ನಾಗಿಸುವುದೇ ನಮ್ಮ ಗುರಿಯಾಗಿದೆ. ಚಿತ್ರರಂಗದಲ್ಲಿನ ನೌಕರರ ಸಮಸ್ಯೆಗಳಿಗೆ ಪರಿಹಾರ ಹುಡುಕಿ, ನಟ ನಟಿಯರ ಗೌರವ ಹೆಚ್ಚಿಸುವ ವೇದಿಕೆ ಸೃಷ್ಟಿ ಮಾಡಬೇಕಿದೆ. ಅಲ್ಲದೆ ನೆಲ,ಜಲ,ಭಾಷೆ ವಿಚಾರಕ್ಕೆ ಕನ್ನಡ ಚಿತ್ರರಂಗ ಸದಾ ಸೇತುವೆಯಂತೆ ಕೆಲಸ ಮಾಡುವ ಉದ್ದೇಶ ಹೊಂದಿದ್ದೇವೆ’ ಎಂದರು.

M.N 4

‘ಈಗಾಗಲೇ ನನಗೆ ಸಿಕ್ಕಿರುವ ಸೇವೆಯ ಅವಕಾಶ ಬಳಸಿಕೊಂಡು ಹೊಂಬಾಳೆ ಫಿಲ್ಮ್ ಸಂಸ್ಥೆಯಿಂದ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ 50 ಲಕ್ಷ ದೇಣಿಗೆ ತಂದಿದ್ದೇವೆ. ಮಲ್ಲೇಶ್ವರಂ ಕೋ ಆಪರೇಟಿವ್ ಬ್ಯಾಂಕ್ ನಿಂದ 3 ಕೋಟಿ ಸಾಲ ಮಂಜೂರು ಮಾಡಿಸಿ ಕಟ್ಟಡ ಕಾಮಗಾರಿಗೆ ತ್ವರಿತ ರೂಪ ನೀಡಿದ್ದೇವೆ. ಇದು ಸೇವೆಗಾಗಿ ಸಿಕ್ಕ ವೇದಿಕೆಯಾಗಿದೆ. ಚಿತ್ರರಂಗದ ಋಣ ನನ್ನ ಮೇಲೆ ಸಾಕಷ್ಟು ಇದೆ, ಆದರೆ ಅದನ್ನ ಸ್ವಲ್ಪ ಮಟ್ಟಿಗಾದರೂ ತೀರಿಸುವ ಕೆಲಸವನ್ನು ಈ ಚುನಾವಣೆಯ ಮೂಲಕ ಮಾಡುವ ಉದ್ದೇಶ ಹೊಂದಿದ್ದೇನೆ’ ಎಂದು ಹಿರಿಯ ನಿರ್ಮಾಪಕ ಎಂ.ಎನ್.ಸುರೇಶ್‌ ಹೇಳಿದರು. ಇದನ್ನೂ ಓದಿ:ಸಲ್ಲು, ಶಾರುಖ್ ಖಾನ್ ಮನೆಯಲ್ಲಿ ಗಣೇಶ ಹಬ್ಬ: ಮೆಚ್ಚಿಕೊಂಡ ಫ್ಯಾನ್ಸ್

M.N 1 1

ಚಿತ್ರೋಧ್ಯಮಕ್ಕೆ  ಆಧುನಿಕತೆ, ತಂತ್ರಜ್ಞಾನದ ಜೊತೆಗೆ ಹೊಸತನ ಜೊತೆಯಾದಾಗ ಅಷ್ಟೇ ಪ್ರಮಾಣದಲ್ಲಿ ಹೊಸ ಹೊಸ ಸವಾಲುಗಳು ಎದುರಾಗುತ್ತವೆ. ಅದು ನಟ, ನಟಿಯರಿಗೆ, ತಂತ್ರಜ್ಞರಿಗೆ, ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಸಂಬಂಧಿಸಿದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಹೊಸ ಕನಸುಗಳೊಂದಿಗೆ ಚಿತ್ರರಂಗಕ್ಕೆ ಬರುವ ಹೊಸಬರಿಗಾಗಿ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇವೆ. ಈ ಎಲ್ಲಾ ಕಾರಣದಿಂದ ಈ ಬಾರಿಯ ಚುನಾವಣೆಯಲ್ಲಿ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದ್ ಅವರ ಮಾರ್ಗದರ್ಶನಲ್ಲಿ ಚುನಾವಣೆಗೆ ಸಜ್ಜಾಗಿರುವ ನಮ್ಮ ತಂಡವನ್ನು ಬೆಂಬಲಿಸಿ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಶ್ರೇಯೋಭಿವೃದ್ದಿಗೆ ಸಹಕರಿಸಬೇಕು’ ಎಂದು ವಿನಂತಿಸಿಕೊಂಡರು.

ಎಂ.ಎನ್.ಸುರೇಶ್‌ ನೇತೃತ್ವದ ಈ ತಂಡಕ್ಕೆ ಮಾರ್ಗದರ್ಶಕರಾಗಿ ಹಿರಿಯ ನಿರ್ಮಾಪಕ, ಹೋರಾಟಗಾರ ಸಾ.ರಾ.ಗೋವಿಂದ್ ನಿಂತಿದ್ದಾರೆ. ತಂಡದಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ವಿತರಕ ವಲಯದಿಂದ ಜಿ.ವೆಂಕಟೇಶ್‌ ಚಿಂಗಾರಿ ಬಿ ಮಹದೇವ್ ಹಾಗೂ ಪ್ರದರ್ಶಕರ ವಲಯದಿಂದ ಎಂ. ನರಸಿಂಹಲು ಸ್ಪರ್ಧೆಗಿಳಿದಿದ್ದಾರೆ. ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪಕರ ವಲಯದಿಂದ ರಾಜೇಶ್ ಬ್ರಹ್ಮಾವರ್, ವಿತರಕ ವಲಯದಿಂದ ಕೆ ಪಾರ್ಥ ಸಾರಥಿ, ಖಜಾಂಚಿ ಸ್ಥಾನಕ್ಕೆ ದಯಾಳ್ ಪದ್ಮನಾಭನ್ ಸ್ಪರ್ಧೆ ಮಾಡುತ್ತಿದ್ದು  ಕಾರ್ಯದರ್ಶಿ ಸ್ಥಾನಕ್ಕೆ ಸುಂದರ್ ರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಲ್ಲರೂ ಸುದ್ದಿಗೋಷ್ಠಿಯಲ್ಲಿ ಹಾಜರಾಗಿ ಚುನಾವಣೆಗೆ ಬೆಂಬಲ ಕೇಳಿದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:electionFilm ChamberM.N. Sureshಎಂ.ಎನ್. ಸುರೇಶ್ಚುನಾವಣೆಫಿಲ್ಮ್ ಚೇಂಬರ್
Share This Article
Facebook Whatsapp Whatsapp Telegram

You Might Also Like

Prathap Simha
Districts

ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ವಿರುದ್ಧ ಪ್ರತಾಪ್ ಕಿಡಿ

Public TV
By Public TV
54 minutes ago
Shubman Gill Akash Deep
Cricket

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

Public TV
By Public TV
1 hour ago
yathindra siddaramaiah
Districts

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ

Public TV
By Public TV
2 hours ago
Shubman Gill Team India
Cricket

ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Public TV
By Public TV
2 hours ago
Ramya 1
Cinema

ನಾನು ಬಾಸ್ಕೆಟ್‌ಬಾಲ್ ಪ್ಲೇಯರ್, ಸ್ಪೋರ್ಟ್ಸ್‌ಗೆ ಹೈಟ್ ಮ್ಯಾಟರ್ ಆಗಲ್ಲ: ರಮ್ಯಾ

Public TV
By Public TV
2 hours ago
Akash Deep 1
Cricket

ಆಕಾಶ್‌ ದೀಪ್‌ ಬೆಂಕಿ ಬೌಲಿಂಗ್- ಭಾರತಕ್ಕೆ 336 ರನ್‌ಗಳ ಭರ್ಜರಿ ಜಯ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?