ಮಂಗಳೂರು: ಓಮ್ನಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತುಳು ಚಿತ್ರ ನಿರ್ದೇಶಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ಶಿರ್ತಾಡಿಯಲ್ಲಿ ನಡೆದಿದೆ.
ಹ್ಯಾರಿಸ್ ಹೌದಾಲ್(30) ಮೃತಪಟ್ಟ ಯುವ ಚಿತ್ರ ನಿರ್ದೇಶಕ. ಹ್ಯಾರಿಸ್ ಹೌದಾಲ್ ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಮೃತ ಹ್ಯಾರಿಸ್ ಹೌದಾಲ್ ಕಾರಿನಲ್ಲಿ ಮೂಡುಬಿದ್ರೆಯಿಂದ ಶಿರ್ತಾಡಿ ಕಡೆಗೆ ಬೆಳಗ್ಗಿನ ಜಾವ ಹೋಗುತ್ತಿದ್ದರು. ಈ ವೇಳೆ ಮೂಡುಬಿದ್ರೆಯ ಶಿರ್ತಾಡಿ ಬಳಿ ನಿದ್ದೆ ಮಂಪರಿನಲ್ಲಿ ವೇಗವಾಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ನಿರ್ದೇಶಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹ್ಯಾರಿಸ್ ನಿರ್ದೇಶನದ ‘ಆಟಿಡೊಂಜಿ ದಿನ’ ತುಳು ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು.