ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ‘ವಿರಾಟಪುರ ವಿರಾಗಿ’ (Viratapur Viragi) ಸಿನಿಮಾ ವೀಕ್ಷಿಸಿ, ಯುವಕರು ತಮ್ಮ ವರ್ತನೆಗಳನ್ನು ತಿದ್ದುಕೊಳ್ಳಬೇಕು. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಹಾಗಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಒಂದು ವಾರ ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸುತ್ತೇನೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ್ (C.C. Patil) ಹೇಳಿದ್ದಾರೆ. ವಿರಾಟಪುರ ವಿರಾಗಿ ಸಿನಿಮಾದ ಟ್ರೈಲರ್ (Trailer) ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ.
Advertisement
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (BS Lingadevaru) ನಿರ್ದೇಶನದಲ್ಲಿ ಮೂಡಿ ಬಂದಿರುವ, ಹಾನಗಲ್ಲ ಕುಮಾರಸ್ವಾಮಿಗಳ (Hanagalla Kumaraswamy) ಜೀವನವನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾದ ಟ್ರೈಲರ್ ಗದಗನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಯಿತು. ಈ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಐದು ಸಾವಿರಕ್ಕೂ ಹೆಚ್ಚು ಜನರು, ನಾಡಿನ ಅನೇಕ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಾಕ್ಷಿಯಾಗಿದ್ದರು. ಕಾರ್ಯಕ್ರಮಕ್ಕೂ ಮುನ್ನ 6 ರಥಗಳು ರಾಜ್ಯದ ವಿವಿಧ ಭಾಗಗಳಿಂದ ಹೊರಟು 7000 ಕಿಮೀ ಪ್ರಯಾಣ ಮಾಡಿ, ಗದಗಿಗೆ ಆಗಮಿಸಿದ್ದವು. 500ಕ್ಕೂ ಹೆಚ್ಚು ಮಹಿಳೆಯರು ಪೂರ್ಣ ಕುಂಬದಿಂದ ಅವುಗಳನ್ನು ಸ್ವಾಗತ ಮಾಡಲಾಯಿತು.
Advertisement
Advertisement
ವಿರಾಟಪುರ ವಿರಾಗಿ ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ ಜನಪ್ರಿಯ ಯುವ ನಾಯಕ ಬಿ.ವೈ ವಿಜಯೇಂದ್ರ ‘ಇಂಥದ್ದೊಂದು ಸಿನಿಮಾ ಆಗಿದೆ ಎನ್ನುವುದೇ ನಮಗೊಂದು ಹೆಮ್ಮೆ. ಈ ಸಿನಿಮಾವನ್ನು ನಾವೆಲ್ಲರೂ ಗೆಲ್ಲಿಸಬೇಕು. ಟ್ರೈಲರ್ ನೋಡಿದ ಮೇಲೆ ಸಿನಿಮಾ ನೋಡಬೇಕು ಎನ್ನುವ ಕುತೂಹಲ ಇನ್ನೂ ಹೆಚ್ಚಾಗಿದೆ. ಅಪರೂಪದ ಸಿನಿಮಾ ಮಾಡಿರುವ ಬಿ.ಎಸ್.ಲಿಂಗದೇವರು ಮತ್ತು ಮೌನತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಗೆ ನಾವೆಲ್ಲರೂ ಋಣಿಯಾಗಿರಬೇಕು’ ಎಂದರು. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ
Advertisement
ನಿರ್ದೇಶಕ ಬಿ.ಎಸ್.ಲಿಂಗದೇವರು ಮಾತನಾಡುತ್ತಾ, ‘ಆಧುನಿಕ ಜಗತ್ತಿನಲ್ಲಿ ಧಾರ್ಮಿಕ, ಭಕ್ತಿಪ್ರಧಾನ ಸಿನಿಮಾಗಳನ್ನು ಜನರಿಗೆ ಮುಟ್ಟಿಸುವುದೇ ಸವಾಲಿನ ಕೆಲಸವಾಗಿದೆ. ಹಾಗಾಗಿ ಈ ಸಿನಿಮಾವನ್ನು ಜನರಿಗೆ ತಲುಪಿಸುವ ಕೆಲಸ ಎಲ್ಲರಿಂದಲೂ ನಡೆಯಬೇಕು. ಈ ಸಿನಿಮಾವಾಗಲು ಅನೇಕ ಗುರುಗಳ, ಪಂಡಿತರು ಮಾರ್ಗದರ್ಶನ ಮಾಡಿದ್ದಾರೆ. ಜನವರಿ 13ರಂದು ಸಿನಿಮಾ ತೆರೆಗೆ ಬರಲಿದೆ’ ಎಂದರು.
ಈ ಸಿನಿಮಾಗೆ ಸರಕಾರವು ತೆರಿಗೆ ವಿನಾಯಿತಿ ಜೊತೆಗೆ ಸರ್ಕಾರದಿಂದ ಸಬ್ಸಿಡಿ ಕೊಡಿಸಲು ಸಚಿವರಾದ ಸಿ.ಸಿ. ಪಾಟೀಲ್ ಅವರಿಗೆ ಮನವಿ ಮಾಡಿಕೊಂಡರು ಮುಖಂಡ ಅಲ್ಲಂ ವೀರಭದ್ರಪ್ಪ. ಈ ಕಾರ್ಯಕ್ರಮದಲ್ಲಿ ತೋಂಟದಾರ್ಯ ಮಠದ ಡಾ.ಸಿದ್ದರಾಮ ಸ್ವಾಮೀಜಿ, ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ದೇಶ್ವರ ರಾಜಯೋಗೀಂದ್ರ ಸ್ವಾಮೀಜಿ, ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು, ಸಮಾಜಸೇವಕಿ ಸಂಯುಕ್ತಾ ಕಳಕಪ್ಪ ಬಂಡಿ, ಶಾಸಕ ಎಚ್.ಕೆ.ಪಾಟೀಲ್, ಯುವ ಮುಖಂಡ ಅನಿಲ್ ಮೆಣಸಿನಕಾಯಿ, ಮಾಜಿ ಶಾಸಕ ಜಿ.ಎಸ್.ಪಾಟೀಲ್, ಕಲಾವಿದ ಸುಚೇಂದ್ರ ಪ್ರಸಾದ್, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು.