ದುಬೈ: ಮಹಿಳಾ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಅಂತಿಮ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದ್ದು, ಮೊದಲ ದಿನವೇ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡದ ವಿರುದ್ಧ ಆಡಲಿದೆ.
2020ರ ಮಹಿಳಾ ವಿಶ್ವಕಪ್‍ನಲ್ಲಿ ಒಟ್ಟು ಹತ್ತು ತಂಡಗಳು ಪಾಲ್ಗೊಳ್ಳುತ್ತಿದ್ದು ಗ್ರೂಪ್ ಎ ಮತ್ತು ಗ್ರೂಪ್ ಬಿ ಎಂದು ವಿಂಗಡಿಸಲಾಗಿದೆ. ಭಾರತ ಮಹಿಳಾ ತಂಡವು ‘ಎ’ ಗುಂಪಿನಲ್ಲಿ ಸ್ಥಾನ ಪಡೆದುಕೊಂಡಿದೆ. ಆಸ್ಟ್ರೇಲಿಯಾದಲ್ಲಿ ಆಯೋಜನೆಯಾಗಿರುವ ಐಸಿಸಿ ಮಹಿಳಾ ಟಿ20 ಕ್ರಿಕೆಟ್ ಟೂರ್ನಿ 2020ರ ಫೆಬ್ರವರಿ 21ರಿಂದ ಮಾರ್ಚ್ 8ರವರೆಗೆ ನಡೆಯಲಿದೆ.
ಇದೇ ಮೊದಲ ಬಾರಿಗೆ ಥಾಯ್ಲೆಂಡ್ ಮಹಿಳಾ ತಂಡವು ಟಿ-20 ವಿಶ್ವಕಪ್ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಸ್ಕಾಟ್ಲೆಂಡ್‍ನಲ್ಲಿ ನಡೆದ ಮಹಿಳಾ ವಿಶ್ವಕಪ್ ಅರ್ಹತಾ ಸುತ್ತಿನ ಟೂರ್ನಿಯ ಫೈನಲ್‍ನಲ್ಲಿ ಥಾಯ್ಲೆಂಡ್ ತಂಡವನ್ನು 70 ರನ್‍ಗಳಿಂದ ಮಣಿಸಿದ ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡವು ಕೂಡ ವಿಶ್ವಕಪ್‍ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಬಾಂಗ್ಲಾದೇಶವು ‘ಎ’ ಗುಂಪಿನಲ್ಲಿ ಭಾರತ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡಗಳ ವಿರುದ್ಧ ಆಡಲಿದೆ.
Here's how the groups for the #T20WorldCup shape up ???? pic.twitter.com/O2V9UqTSHd
— T20 World Cup (@T20WorldCup) September 7, 2019
ಇತ್ತ ‘ಬಿ’ ಗುಂಪಿನಲ್ಲಿ ಬಲಿಷ್ಠ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಥಾಯ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ವಿರುದ್ಧ ಪೈಪೋಟಿ ನಡೆಸಲಿದೆ. ಟಿ-20 ವಿಶ್ವಕಪ್‍ನಲ್ಲಿ ಥಾಯ್ಲೆಂಡ್ ತನ್ನ ಮೊದಲ ಪಂದ್ಯವನ್ನು ಬಲಿಷ್ಠ ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ.
ಇದೇ ಮೊದಲ ಬಾರಿ ಅದೇ ವರ್ಷ ಒಂದೇ ಸ್ಥಳದಲ್ಲಿ ಪುರುಷರ ಮತ್ತು ಮಹಿಳಾ ಟಿ20 ವಿಶ್ವಕಪ್ ಟೂರ್ನಿಗಳು ನಡೆಯುತ್ತಿರುವುದು ವಿಶೇಷವಾಗಿದೆ. ಮಹಿಳಾ ಟಿ20 ವಿಶ್ವಕಪ್ ಟೂರ್ನಿಯು 2020ರ ಫೆಬ್ರವರಿ 21ರಂದು ಆರಂಭವಾಗಲಿದ್ದು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ (ಮಾರ್ಚ್ 8ರಂದು) ಫೈನಲ್ ಪಂದ್ಯವನ್ನು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಸಲು ಐಸಿಸಿ ನಿರ್ಧರಿಸಿದೆ.
ಪುರುಷರ ಟಿ-20 ವಿಶ್ವಕಪ್ ಟೂರ್ನಿ ಅಕ್ಟೋಬರ್ 18ರಿಂದ ನವೆಂಬರ್ 15ರವರೆಗೆ ನಡೆಯಲಿದೆ. ಒಟ್ಟು 16 ತಂಡಗಳು ಪ್ರಶಸ್ತಿಗಾಗಿ ಭರ್ಜರಿ ಪೈಪೋಟಿ ನಡೆಸಲಿವೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 24ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.
Bangladesh win the #T20WorldCup Qualifier! pic.twitter.com/xUpkZfV62P
— T20 World Cup (@T20WorldCup) September 7, 2019