– ಪ್ರತಿ ಎಕರೆಗೆ 2.14 ಕೋಟಿ ರೂ. ನಿಗದಿ ಮಾಡಿದೆ
ರಾಮನಗರ: ಬಿಡದಿ ಟೌನ್ ಶಿಪ್ (Bidadi Township) ಜಟಾಪಟಿ ಹಿನ್ನೆಲೆ ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ (Karnataka Government) ಅಂತಿಮ ಅಧಿಸೂಚನೆ ಪ್ರಕಟಿಸಿದೆ.
ಯೋಜನಾ ವ್ಯಾಪ್ತಿಯ 9 ಕಂದಾಯ ಗ್ರಾಮಗಳ ಪೈಕಿ ಪ್ರಾರಂಭಿಕವಾಗಿ 3 ಗ್ರಾಮಗಳ 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ ಮಾಡಿದೆ. ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮದ ಸುಮಾರು 754 ರೈತರ ಜಮೀನುಗಳ ಭೂಸ್ವಾಧೀನಕ್ಕೆ (Farmers Land Acquisition) ಸರ್ಕಾರ ಅಧಿಸೂಚನೆ ಹೊರಡಿಸಿದೆ.

ರೈತರು ಸೂಕ್ತ ದಾಖಲೆ ಸಲ್ಲಿಸಿ ಪರಿಹಾರ ಪಡೆದುಕೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಿದ್ದು, ಪ್ರತಿ ಎಕರೆಗೆ ಕನಿಷ್ಠ 2.14 ಕೋಟಿ ರೂ. ದರ ನಿಗದಿ ಮಾಡಿದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು – ಎಕ್ಸ್ ಪೋಸ್ಟ್‌ನಲ್ಲಿ ನಟ ಸ್ಪಷ್ಟನೆ
ಕಳೆದ ಒಂದೂವರೆ ವರ್ಷದಿಂದ ಯೋಜನೆ ವಿರೋಧಿಸಿ ರೈತರು ನಿರಂತರ ಹೋರಾಟ ಮಾಡ್ತಿದ್ದಾರೆ. ಆದರೆ ಬಿಡದಿ ಟೌನ್ ಶಿಪ್ ಯೋಜನೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರೋ ಸಿಎಂ ಡಿ.ಕೆ ಶಿವಕುಮಾರ್, ಪಟ್ಟು ಬಿಡದೇ ಟೌನ್ ಶಿಪ್ ನಿರ್ಮಾಣದ ಪ್ರಕ್ರಿಯೆ ಮುಂದುವರೆಸಿದ್ದಾರೆ.

ಇನ್ನೂ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಾಥ್ ನೀಡಿದ್ದು, ರೈತರ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ. ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಗಿಫ್ಟ್: ಉಚಿತ ಬಸ್ ಪಾಸ್ ಯೋಜನೆಗೆ ಇರೋ ನಿಯಮಗಳೇನು?
