Bengaluru City

ಕೊನೆಗೂ ಸಚಿವರಾಗಿ 7 ಮಂದಿ ಪ್ರಮಾಣ ವಚನ

Published

on

Share this

ಬೆಂಗಳೂರು: ಕೊನೆಗೂ ಬಿಜೆಪಿಯ ನೂತನ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಇಂದು 7 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್ ಶಂಕರ್, ಸಿ.ಪಿ ಯೋಗೇಶ್ವರ್ ಹಾಗೂ ಎಸ್. ಅಂಗಾರ ಅವರಿಗೆ ರಾಜ್ಯಪಾಲ ವಜುಭಾಯ್ ವಾಲಾ ಪ್ರಮಾಣವಚನ ಬೋಧಿಸಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜಭವನಕ್ಕೆ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ. ಅಲ್ಲದೆ ಸಚಿವರ ಆಪ್ತರಿಗೂ ಒಳಗಡೆ ಪ್ರವೇಶ ನಿರಾಕರಿಸಲಾಗಿತ್ತು. ಒಟ್ಟಾರೆ 100 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಯೂಟ್ಯೂಬ್ ಲಿಂಕ್ ಮೂಲಕ ಸಮಾರಂಭ ನೋಡಲು ಅವಕಾಶ ಕಲ್ಪಿಸಲಾಗಿತ್ತು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗುರುತಿನ ಚೀಟಿ ರೆಡ್ ಪಾಸ್, ಬ್ಲ್ಯೂ ಪಾಸ್ ಇದ್ದರೆ ಮಾತ್ರ ರಾಜಭವನದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ರಾಜಭವನದ ಹೊರಗೆ ಟೈಟ್ ಸೆಕ್ಯೂರಿಟಿ ಕೈಗೊಳ್ಳಲಾಗಿತ್ತು. ಹೊರಗೆ ಜನ ಸೇರದಂತೆ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು.

ಕೆಲ ದಿನಗಳಿಂದ ತಾವೂ ಸಚಿವರಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಕೆಲವರಿಗೆ ಇಂದು ನಿರಾಸೆಯಾಗಿದೆ. ಮುನಿರತ್ನ, ಸುನಿಲ್ ಕುಮಾರ್ ಮೊದಲಾದವರ ಹೆಸರು ಸಚಿವರ ಪಟ್ಟಿಯಲ್ಲಿ ಕೇಳಿ ಬಂದಿತ್ತು. ಆದರೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ 7 ಜನರ ಹೆಸರನ್ನು ಸಿಎಂ ಬಹಿರಂಗಪಡಿಸಿದ್ದರು. ಈ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿತು. ಅಸಮಾಧಾನಿತರು ಸಿಎಂ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಇತ್ತ ಸಚಿವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದ ಮುನಿರತ್ನ ಹೆಸರನ್ನು ಕೂಡ ಕೈ ಬಿಡಲಾಗಿದೆ. ಆದರೆ ಕೆಲವೇ ತಿಂಗಳಲ್ಲಿ ಅವರಿಗೂ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

Click to comment

Leave a Reply

Your email address will not be published. Required fields are marked *

Advertisement
Districts12 mins ago

ಅನುಮತಿ ಇಲ್ಲದೇ ಬಿಸಿಯೂಟದ ಕೋಣೆ ನೆಲಸಮ – ಅಧ್ಯಕ್ಷನ ದರ್ಪಕ್ಕೆ ಗ್ರಾಮಸ್ಥರ ಆಕ್ರೋಶ

Bengaluru City33 mins ago

ಮತ್ತೆ ಒಂದಾಗಲಿರುವ ರಾಜಕುಮಾರ ಜೋಡಿ – ಸೆಟ್ಟೇರಲಿದೆ ಪುನೀತ್, ಸಂತೋಷ್ ಕಾಂಬಿನೇಷನ್‍ನ ಹೊಸ ಸಿನಿಮಾ

Districts36 mins ago

ಎಟಿಎಂ ಡಿಟೆಲ್ಸ್ ಪಡೆದು 99 ಸಾವಿರ ವಂಚನೆ

Districts45 mins ago

ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪನವರ ಅಧಿಕಾರ ಹೋಗಿದೆ: ವಿಜಯಾನಂದ ಕಾಶಪ್ಪನವರ್

Karnataka50 mins ago

ಅಪಘಾತದಿಂದ ಜೀವ ಉಳಿಸಲು ಅಂಗಲಾಚಿದ ಯುವಕ, ಯುವತಿ

Districts58 mins ago

ಭಕ್ತರಿಗೆ ಘಾಸಿಯಾಗಿದೆ, ಸರಿದೂಗಿಸುವ ಪ್ರಯತ್ನ ಮಾಡುತ್ತೇನೆ: ಬೊಮ್ಮಾಯಿ

Chikkaballapur1 hour ago

ಪ್ರೇಮ ವೈಫಲ್ಯ ಶಂಕೆ – ಯುವಕನ ಅನುಮಾನಾಸ್ಪದ ಸಾವು

Davanagere1 hour ago

ರಾಜಕೀಯ ತಿರುವು ದಾವಣಗೆರೆಯಿಂದಲೇ ಆರಂಭ: ಈಶ್ವರಪ್ಪ

Bengaluru City2 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನದಲ್ಲಿ ಧಿಡೀರ್ ಏರಿಕೆ

Cinema2 hours ago

ಪೂಜಾ ಮೇಲೆ ಮುನಿಸಿಕೊಂಡ್ರಾ ಬಾಹುಬಲಿ?