ಅರೆಬರೆ ಉಡುಪು ಧರಿಸುವ ಮೂಲಕವೇ ಫೇಮಸ್ ಆಗಿದ್ದ ಹಿಂದಿ ಬಿಗ್ ಬಾಸ್ ಸ್ಪರ್ಧಿ (Bigg Boss Hindi) ಉರ್ಫಿ ಜಾವೇದ್ (Urfi Javed) ಕೊನೆಗೂ ಮೈ ತುಂಬಾ ಬಟ್ಟೆ ಹಾಕಿದ್ದಾರೆ. ವಿಚಿತ್ರ ಬಟ್ಟೆಗಳನ್ನ ಧರಿಸೋದ್ರಲ್ಲಿ ಯಾವಾಗಲೂ ಮುಂದಿದ್ದ ಉರ್ಫಿ ಮೊಟ್ಟ ಮೊದಲ ಬಾರಿಗೆ ಮೈತುಂಬಾ ಬಟ್ಟೆ ಧರಿಸಿ ಏಲಿಯನ್ ರೂಪದಲ್ಲಿ ಹೊರಗೆ ಬಂದಿದ್ದಾರೆ.
ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಕ್ವೀನ್ ಉರ್ಫಿ ಜಾವೇದ್ (Urfi Javed) ಅಂದಾಕ್ಷಣ ಥಟ್ ಅಂತಾ ನೆನಪಾಗೋದೇ ಅವರು ಧರಿಸುವ ವಿಭಿನ್ನ ಬಟ್ಟೆಗಳು. ಹೀಗಿರುವಾಗ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿದಿರಿನ ಧಿರಿಸಿನಲ್ಲಿ ಉರ್ಫಿ ಎಂಟ್ರಿ ಕೊಟ್ಟಿದ್ದರು. ನಟಿಯ ಈ ಲುಕ್ ಟ್ರೋಲಿಗರ ಬಾಯಿಗೆ ಆಹಾರವಾಗಿತ್ತು. ಬಿದಿರಿನ ಉಡುಪಿನ ವೀಡಿಯೋವನ್ನ ಅನೇಕರು ಶೇರ್ ಮಾಡಿದ್ದರು.
ವಿಚಿತ್ರ ಫ್ಯಾಷನ್ ಐಕಾನ್ ಅಂತಲೇ ಫೇಮಸ್ ಆಗಿರುವ ಉರ್ಫಿ ಜಾವೇದ್ ಗೆ (Urfi Javed) ಅನೇಕರು ಬೆದರಿಕೆ ಹಾಕಿದ್ದಾರೆ. ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ಉರ್ಫಿ ಕೂಡ ಸುಮ್ಮನೆ ಕುಳಿತಿಲ್ಲ. ತಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಹಿಳಾ ಆಯೋಗಕ್ಕೆ ಉರ್ಫಿ ದೂರು ನೀಡಿದ್ದರು. ತಮಗೆ ಭದ್ರತೆ ಬೇಕು ಎಂದು ಉರ್ಫಿ ಮನವಿ ಮಾಡಿಕೊಂಡಿದ್ದರು.
ಉರ್ಫಿ ಅವರಿಗೆ ಭದ್ರತೆ ಮತ್ತು ಅವರ ಬೇಡಿಕೆಯನ್ನು ಪರಿಶೀಲಿಸುವಂತೆ ಮುಂಬೈ (Mumbai)ಪೊಲೀಸ್ ಕಮಿಷನರ್ ಗೆ (Commissioner) ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿತ್ತು. ಮುಂಬೈ ಪೊಲೀಸ್ ಕಮಿಷ್ನರ್ ಗೆ ಬರೆದ ಪತ್ರದಲ್ಲಿ ಉರ್ಫಿ ಜಾವೇದ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಹಿಳಾ ಆಯೋಗ ಅಧ್ಯಕ್ಷೆ ರೂಪಾಲಿ ಚಂಕಕರ್ (Rupali Chankakar) ತಿಳಿಸಿದ್ದರು. ಇದನ್ನೂ ಓದಿ:ವರುಣ್, ಲಾವಣ್ಯ ನಿಶ್ಚಿತಾರ್ಥದಲ್ಲಿ ನಿಹಾರಿಕಾ ಪತಿ ಗೈರು- ಡಿವೋರ್ಸ್ ಸುದ್ದಿಗೆ ಸಿಕ್ತು ಸಾಕ್ಷಿ
ಉರ್ಫಿ ಜಾವೇದ್ ಅವರು ಚಿತ್ರಾ ಕಿಶೋರ್ ವಾಘ್ ಮೇಲೆ ಆರೋಪ ಮಾಡಿದ್ದರು. ಇವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಹಾಗೂ ಮಾನಹಾನಿ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ತಮ್ಮ ವಕೀಲರ ಮೂಲಕ ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಉರ್ಫಿ ದೂರು ನೀಡಿದ್ದರು. ಅಲ್ಲದೇ, ತಮಗೆ ಜೀವ ಬೆದರಿಕೆ ಇರುವ ಕಾರಣದಿಂದಾಗಿ ರಕ್ಷಣೆ ನೀಡುವಂತೆ ಉರ್ಫಿ ಮನವಿ ಮಾಡಿದ್ದರು. ಅದಕ್ಕೂ ಮುನ್ನ ತಮ್ಮಿಂದ ಯಾವುದೇ ತಪ್ಪು ಆಗಿಲ್ಲ ಎಂದು ಮನದಟ್ಟು ಮಾಡಲು ವಿಚಾರಣೆಗೂ ಖುದ್ದಾಗಿ ಹೋಗಿದ್ದರು.
ನಟಿ ಉರ್ಫಿ ಜಾವೇದ್ ಮಹಿಳೆಯರ ಮಾನ ಹರಾಜು ಹಾಕುವಂತಹ ಬಟ್ಟೆಗಳನ್ನು ಹಾಕುತ್ತಾರೆ. ಅಶ್ಲೀಲ ಹಾಗೂ ಅಸಭ್ಯವಾಗಿ ನಡೆದುಕೊಡುತ್ತಾರೆ. ಇಂತಹ ನಟಿಯ ಮೇಲೆ ಕ್ರಮ ತಗೆದುಕೊಳ್ಳಬೇಕು ಎಂದು ಚಿತ್ರಾ ಅವರು ಕೆಲ ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿದ್ದರು. ಅಲ್ಲದೇ, ಅಸಹ್ಯ ಎನ್ನುವಂತಹ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಕ್ಕೆ ಚಿತ್ರ ಆಕ್ಷೇಪ ವ್ಯಕ್ತ ಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಉರ್ಫಿ ಮಹಿಳಾ ಆಯೋಗಕ್ಕೆ ಮೊರೆ ಹೋಗಿದ್ದರು.
ತನ್ನ ವಿಚಿತ್ರ ಕಾಸ್ಟ್ಯೂಮ್ ಮೂಲಕ ಬಾಲಿವುಡ್ ಸಿನಿ ರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಉರ್ಫಿ ಜಾವೇದ್ ಮೇಲೆ ಉರಿದುಕೊಂಡವರೇ ಹೆಚ್ಚು. ಅವಳು ಧರಿಸುವ ಅರೆಬರೆ ಬಟ್ಟೆಯ ಬಗ್ಗೆ ಸಾಕಷ್ಟು ದೂರುಗಳು ಇವೆ. ಈ ವಿಚಾರವಾಗಿ ಅವಳು ಪೊಲೀಸ್ ಸ್ಟೇಶನ್ ಮೆಟ್ಟಿಲೂ ಹತ್ತಿದ್ದಾರೆ. ದುಬೈನಲ್ಲಿ ಪೊಲೀಸ್ ವಿಚಾರಣೆಗೂ ಒಳಗಾಗಿದ್ದಾರೆ. ಸದಾ ವಿವಾದವನ್ನೇ ಬೆನ್ನತ್ತಿ ಹೋಗುವ ಉರ್ಫಿ ಬಗ್ಗೆ ಮೊದಲ ಬಾರಿಗೆ ವ್ಯಕ್ತಿಯೊಬ್ಬರು ಹೆಮ್ಮೆಯಿಂದ ಮಾತನಾಡಿದ್ದಾರೆ. ಅವರನ್ನು ಮಾದರಿಯಾಗಿ ತಗೆದುಕೊಳ್ಳುವಂತೆ ಕರೆಕೊಟ್ಟಿದ್ದಾರೆ.
ಬಾಲಿವುಡ್ ಸಿಂಗರ್ ಯೋ ಯೋ ಹನಿ ಸಿಂಗ್, ಸದ್ಯ ತಮ್ಮ ಆಲ್ಬಂವೊಂದರ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಉರ್ಫಿ ಜಾವೇದ್ ಬಗ್ಗೆ ಹಾಡಿಹೊಗಳಿದ್ದಾರೆ. ಉರ್ಫಿ ತನ್ನಿಷ್ಟದಂತೆ ಬದುಕುತ್ತಿರುವ ನಟಿ. ತುಂಬಾ ಧೈರ್ಯವಂತೆ. ಯಾರಿಗೂ ಹೆದರದೇ ತನ್ನ ಬದುಕನ್ನು ಕಟ್ಟಿಕೊಂಡಿದ್ದಾಳೆ. ಹಾಗಾಗಿ ದೇಶದ ಹುಡುಗಿಯರು ಅವಳನ್ನು ನೋಡಿ ಕಲಿತುಕೊಳ್ಳಬೇಕು’ ಎಂದು ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ.