ಮುಂಬೈ: ಮುಂದಿನ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಚೀನಾದ ಹ್ಯಾಂಗ್‌ಜೂನಲ್ಲಿ ನಡೆಯುವ ಏಷ್ಯನ್ ಗೇಮ್ಸ್ (Asian Games 2023) ಕ್ರೀಡಾಕೂಟದಲ್ಲಿ ಟೀಂ ಇಂಡಿಯಾ (Team India) ಪಾಲ್ಗೊಳ್ಳಲು ಬಿಸಿಸಿಐ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಕ್ರಿಕೆಟ್ ಕೂಡ ಸ್ಪರ್ಧೆಯ ಭಾಗವಾಗಿದೆ. ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಈ ಟೂರ್ನಿ ನಡೆಯಲಿದೆ. ಟಿ20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ತಂಡವನ್ನು ಕಣಕ್ಕಿಳಿಸಲು ಬಿಸಿಸಿಐನ (BCCI) ಅಪೆಕ್ಸ್ ಕೌನ್ಸಿಲ್ ಒಪ್ಪಿಗೆ ಸೂಚಿಸಿದೆ.
Advertisement
Advertisement
2010 ಮತ್ತು 2014ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಭಾರತ (Team India) ಭಾಗವಹಿಸಲು ನಿರಾಕರಿಸಿತ್ತು. 2028ಕ್ಕೆ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಲು ಬಿಸಿಸಿಐ ಒತ್ತಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ಅನುಮತಿಸಿದೆ. ಇದನ್ನೂ ಓದಿ: Asian Games 2023 – ಶಿಖರ್ ಧವನ್‌ಗೆ ಟೀಂ ಇಂಡಿಯಾ ನಾಯಕತ್ವ?
Advertisement
Advertisement
ಭಾರತದ ಪುರುಷರ ತಂಡ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ಇದೇ ಮೊದಲಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಸ್ಪರ್ಧಿಸಲು ಸಜ್ಜಾಗಿವೆ ಎಂಬುದನ್ನ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ. ಇದನ್ನೂ ಓದಿ: Threadಗೆ ಸ್ಟಾರ್ ಕ್ರಿಕೆಟಿಗರಿಂದ ಫುಲ್ ಸಪೋರ್ಟ್ – ಎಲೋನ್ ಮಸ್ಕ್‌ಗೆ ಟಾಂಗ್ ಕೊಟ್ಟ ಅಶ್ವಿನ್
ಈಗಾಗಲೇ ಸಾಲು-ಸಾಲು ಸರಣಿಗಳನ್ನ ಮುಂದಿಟ್ಟುಕೊಂಡಿರುವ ಟೀಂ ಇಂಡಿಯಾ, ಆಗಸ್ಟ್ 31 ರಿಂದ ಸೆಪ್ಟಂಬರ್ 17ರ ವರೆಗೆ ನಡೆಯುವ ಏಕದಿನ ಏಷ್ಯಾಕಪ್ ಟೂರ್ನಿಗೂ ತಂಡವನ್ನ ಅಣಿಗೊಳಿಸಬೇಕಿದೆ. ಆ ನಂತರ ಅಕ್ಟೋಬರ್ 5 ರಿಂದ ಆರಂಭವಾಗುವ ವಿಶ್ವಕಪ್‌ಗೆ ಬಲಿಷ್ಠ ತಂಡವನ್ನ ಆಯ್ಕೆ ಮಾಡಬೇಕಿರುವುದು ಸವಾಲಾಗಿದೆ. ಹಾಗಾಗಿ ಬಿಸಿಸಿಐ ಟೀಂ ಇಂಡಿಯಾ 2ನೇ ಶ್ರೇಣಿಯ ಪುರುಷರ ತಂಡವನ್ನ ಏಷ್ಯನ್ ಗೇಮ್ಸ್‌ಗೆ ಕಳುಹಿಸುವ ನಿರೀಕ್ಷೆಯಿದೆ.
ಈ ಹಿಂದೆ 2010ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಬಾಂಗ್ಲಾದೇಶ, 2014ರ ಆವೃತ್ತಿಯಲ್ಲಿ ಶ್ರೀಲಂಕಾ ಪುರುಷರ ತಂಡ ಚಿನ್ನದ ಪದಕಗಳನ್ನ ಗೆದ್ದಿತ್ತು. ಮಹಿಳಾ ವಿಭಾಗದಲ್ಲಿ ಪಾಕಿಸ್ತಾನ ತಂಡ 2 ಬಾರಿ ಚಿನ್ನದ ಪದಕ ಬಾಚಿಕೊಂಡಿದೆ.
Web Stories