ಬೆಂಗಳೂರು: ಮೈತ್ರಿ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ರಚನೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಫೈನಾನ್ಸ್ ಬಿಲ್ ಪಾಸಾಗದಿದ್ದರೆ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಹಣ ಇರಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.
ಮೈತ್ರಿ ಸರ್ಕಾರದ ಪತನದಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ಸಾಂವಿಧಾನಿಕ ಬಿಕ್ಕಟ್ಟು ಉದ್ಭವವಾಗುವ ಅಂಚಿನಲ್ಲಿ ಇದ್ದು, ಜುಲೈ ತಿಂಗಳ ಅಂತ್ಯದ ವೇಳೆಗೆ ಹೊಸ ಸರ್ಕಾರ ರಚನೆಯಾಗದಿದ್ದರೆ ರಾಜ್ಯದಲ್ಲಿ ಹೊಸ ಬಿಕ್ಕಟ್ಟು ಶುರುವಾಗುತ್ತದೆ ಎಂದು ಸ್ಪೀಕರ್ ಎಚ್ಚರಿಕೆ ನೀಡಿದರು. ಅಲ್ಲದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುವುದು ನಿಶ್ಚಿತ ಎಂದು ಹೇಳಿದ್ದಾರೆ.
Advertisement
Advertisement
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜುಲೈ 31ರ ಒಳಗೆ ಹೊಸ ಸರ್ಕಾರ ರಚನೆಯಾಗಿ ಹಣಕಾಸು ವಿಧೇಯಕ ವಿಧಾನಸಭೆ ಮತ್ತು ವಿಧಾನ ಪರಿಷತ್‍ನಲ್ಲಿ ಅಂಗೀಕಾರವಾಗಬೇಕು. ಇಲ್ಲದಿದ್ದರೆ ಹಣಕಾಸು ವಿಚಾರದಲ್ಲಿ ತೀವ್ರ ಸಮಸ್ಯೆ ಎದುರಾಗುತ್ತದೆ. ಬಿಜೆಪಿಯವರು ಏನು ಮಾಡುತ್ತಾರೋ ಗೊತ್ತಿಲ್ಲ ಎಂದರು.
Advertisement
Advertisement
ಅತೃಪ್ತ ಶಾಸಕರನ್ನು ರಾಜೀನಾಮೆ ಕುರಿತು ವಿಚಾರಣೆ ನಡೆಸಲು ಕರೆದದ್ದಾಗಿದೆ. ಈ ಕುರಿತು ಅವರ ವಕೀಲರೂ ಸ್ಪಷ್ಟಪಡಿಸಿದ್ದಾರೆ. ನಾನು ನನ್ನ ಕೆಲಸವನ್ನು ಮಾಡಿದ್ದೇನೆ. ಉಳಿದದ್ದು ಅವರಿಗೆ ಬಿಟ್ಟಿದ್ದು. ಶಾಸಕರು ರಾಜೀನಾಮೆ ನೀಡಿದ ನಂತರ ಆರ್ಟಿಕಲ್ 190 (3ಬಿ) ಪ್ರಕಾರ ಕರೆಸಿ ವಿಚಾರಣೆ ಮಾಡಬೇಕು. ಹೀಗಾಗಿ ನಾನು ಶಾಸಕರನ್ನು ವಿಚಾರಣೆಗೆ ಕರೆದಿದ್ದೆ, ಅವರು ಬಂದಿಲ್ಲ. ಈ ಕುರಿತು ಮತ್ತೆ ನೋಟಿಸ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ. ವಿಚಾರಣೆಗೆ ಕರೆದಿದ್ದೇನೆ, ಬೇಕಿದ್ದವರು ಬರಲಿ ಇಲ್ಲದಿದ್ದರೆ ಇಲ್ಲ ಎಂದು ತಿಳಿಸಿದರು.