ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ

- ಜಿಲ್ಲೆಯ ಜನರಿಗೆ ಆರೋಗ್ಯ ಕೆಟ್ರೆ ಎಲ್ಲಿಗೆ ಹೋಗಬೇಕು; ಬಿಜೆಪಿ ಶಾಸಕಿ ಅಸಮಧಾನ

Advertisements

ಬೆಂಗಳೂರು: ಉತ್ತರ ಕನ್ನಡದ ಮಂದಿಗೆ ಮತ್ತೆ ನಿರಾಸೆಯಾಗಿದ್ದು, ಕನಸಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆರ್ಥಿಕ ಇಲಾಖೆ ಕೊಕ್ಕೆ ಹಾಕಿದೆ. ಸರ್ಕಾರದಿಂದ ಈ ನಿರ್ಧಾರ ಪ್ರಕಟವಾಗುತ್ತಿದ್ದಂತೆ ಉತ್ತರ ಕನ್ನಡ ಮಂದಿ ಆಕ್ರೋಶಗೊಂಡು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

Advertisements

ಉತ್ತರ ಕನ್ನಡ(Uttara Kannada) ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(Super Specialty Hospital) ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸದನದಲ್ಲಿ ಕಾರವಾರ(Karwar) ಶಾಸಕಿ ರೂಪಾಲಿ ನಾಯಕ್(Rupali Naik) ಯಾವಾಗ ಆಸ್ಪತ್ರೆ ಮಂಜೂರು ಮಾಡಿಕೊಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆರೋಗ್ಯ ಇಲಾಖೆಯು ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ ಎಂದು ಉತ್ತರಿಸಿದೆ.

Advertisements

ಇಂದಿನ ಸದನದಲ್ಲಿ(Session) ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ರೂಪಾಲಿ ನಾಯಕ್ ಬೇಡಿಕೆ ಇಟ್ಟರು. ಅಷ್ಟೇ ಅಲ್ಲದೇ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಳಂಬ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಗೆ ಇನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಟ್ಟಿಲ್ಲ. ಜಿಲ್ಲೆಯ ಜನರು ಸೂಕ್ತ ಆಸ್ಪತ್ರೆಯಿಲ್ಲದೇ ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ರೋಗಿಗಳಿಗೆ ತೊಂದರೆಯಾದಾಗಲೆಲ್ಲಾ ದೂರದ ಮಣಿಪಾಲ್, ಗೋವಾ, ಮಂಗಳೂರು ಮತ್ತಿತರ ಕಡೆ ಹೋಗಬೇಕು. ಇದರಿಂದಾಗಿ ತುಂಬಾ ಸಮಸ್ಯೆ ಆಗುತ್ತಿದೆ ಎಂದು ತಮ್ಮ ಜಿಲ್ಲೆಯ ಜನತೆ ಅನುಭವಿಸುತ್ತಿರುವ ಯಾತನೆಯನ್ನು ತೆರೆದಿಟ್ಟರು.

ಆಸ್ಪತ್ರೆ ಮಂಜೂರಾತಿ ವಿಳಂಬ ಆಗುತ್ತಿದೆ. ಆದಷ್ಟು ಬೇಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿಕೊಡಿ ಎಂದು ರೂಪಾಲಿ ನಾಯಕ್ ಆಗ್ರಹಿಸಿದರು. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಆರೋಗ್ಯ ಸಚಿವರು ನಿಮ್ಮ ಪ್ರಶ್ನೆಗೆ ಉತ್ತರಿಸಬೇಕು. ಆದರೆ ಸಚಿವರಿಗೆ ಅನಾರೋಗ್ಯ ಹಿನ್ನೆಲೆ ಬಂದಿಲ್ಲ. ಸೋಮವಾರ ಉತ್ತರ ಕೊಡಿಸುವುದಾಗಿ ಸ್ಪೀಕರ್ ಭರವಸೆ ನೀಡಿದರು. ಇದರಿಂದ ಸಿಟ್ಟಾದ ರೂಪಾಲಿ ನಾಯಕ್ ಅವರು, ಆರೋಗ್ಯ ಸಚಿವರಿಗೆ ಆರೋಗ್ಯ ಸರಿ ಇಲ್ಲ ಅಂತ ಬಂದಿಲ್ಲ. ನಮ್ಮ ಜಿಲ್ಲೆಯ ಜನರಿಗೆ ಆರೋಗ್ಯ ಕೆಟ್ರೆ ಎಲ್ಲಿಗೆ ಹೋಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಕೆ ಹರಿಪ್ರಸಾದ್‌ ಕ್ರಿಶ್ಚಿಯನ್‌ ಆದ್ರೆ ನಮ್ಮದೇನೂ ತಕರಾರಿಲ್ಲ: ಮಾಧುಸ್ವಾಮಿ

Advertisements

ಸದನದಲ್ಲಿ ಮಂಡನೆಯಾದ ಲಿಖಿತ ಉತ್ತರಲ್ಲಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟಿಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಹಣಕಾಸು ವೆಚ್ಚದ ಬಗ್ಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. ಹೀಗಾಗಿ ಮತ್ತೊಮ್ಮೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿದರೆ ಮಾತ್ರ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುತ್ತೇವೆ ಎಂದು ತಿಳಿಸಿದೆ.

ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಈ ಹಿಂದೆ ಸ್ವೀಕರಿಸಲಾದ ಪ್ರಸ್ತಾವನೆಗೆ ಸಂಬಧಿಸಿದಂತೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯಕ್ಕಾಗಿ ಅಗತ್ಯವಿರುವ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಇತ್ಯಾದಿ ಮೂಲ ಸೌಲಭ್ಯಗಳು ಹಾಗೂ ಅದಕ್ಕೆ ತಗಲುವ ಆರ್ಥಿಕ ಹೊರೆಯ ವಿವರಗಳನ್ನು ನಿರ್ದೇಶಕರು, ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ಪಡೆದು ಸದರಿ ಪ್ರಸ್ತಾವನೆಯ ಮಂಜೂರಾತಿಗಾಗಿ ಆರ್ಥಿಕ ಇಲಾಖೆಯ ಸಹಮತಿಯನ್ನು ಕೋರಲಾಗಿತ್ತು. ಆದರೆ, ಆರ್ಥಿಕ ಇಲಾಖೆಯು ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ. ಇದನ್ನೂ ಓದಿ: ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

Live Tv

Advertisements
Exit mobile version