ನವದೆಹಲಿ: ತಮ್ಮ ಬೈಕ್‌ಗೆ ಬಿಎಂಡಬ್ಲ್ಯೂ ಕಾರು (BMW Car) ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52), ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಪ್ರಾಣ ಬಿಟ್ಟಿದ್ದಾರೆ. ಇನ್ನೂ ಅಪಘಾತದಲ್ಲಿ ನವತೋಜ್ ಸಿಂಗ್ ಅವರ ಪತ್ನಿ ಸಂದೀಪ್ ಕೌರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಗನ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ತಾಯಿ – 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ಆತ್ಮಹತ್ಯೆ
ಇನ್ನೂ ಅಪಘಾತದ ಬಳಿಕ ನವಜೋತ್ ಸಿಂಗ್ ಪುತ್ರ ಮಾತನಾಡಿದ್ದು, ಅಂಬುಲೆನ್ಸ್ ಚಾಲಕನ ವಿರುದ್ಧ ಆರೋಪ ಮಾಡಿದ್ದಾರೆ. ನಮ್ಮ ತಂದೆ-ತಾಯಿಯನ್ನ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದ್ರೆ ಅಪಘಾತದ ನಡೆದ ಸ್ಥಳದಿಂದ 17 ಕಿಮೀ ದೂರದಲ್ಲಿರುವ ಜಿಟಿಬಿ ನಗರದ ನುಲೈಫ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೀಗಾಗಿ ನನ್ನ ತಂದೆ ಮಾರ್ಗಮಧ್ಯದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ಅಲವತ್ತುಕೊಂಡಿದ್ದಾರೆ. ಇದನ್ನೂ ಓದಿ: ಥಾಯ್ಲೆಂಡ್‌ನಲ್ಲಿ ಝೂ ಸಿಬ್ಬಂದಿಯನ್ನೇ ಕೊಂದು ತಿಂದ ಸಿಂಹಪಡೆ
ಪೊಲೀಸರು ಹೇಳುವಂತೆ ಅಪಘಾತ ನಡೆಧ ಸ್ಥಳದಲ್ಲಿ ಕಾರು ರಸ್ತೆ ಪಕ್ಕದಲ್ಲಿ ಬಿದ್ದಿತ್ತು, ಬೂಕ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಇತ್ತು. ಅಪಘಾತ ನಡೆದಾಗ ಗಗನ್ ಪ್ರೀತ್ ಹೆಸರಿನ ಮಹಿಳೆ ಕಾರು ಚಲಾಯಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿರೋದಾಗಿ ತಿಳಿಸಿದ್ದಾರೆ.
ಅಪಘಾತದ ಬಳಿಕ ಬಿಎಂಡಬ್ಲ್ಯೂ ಕಾರು ಜಾಗೂ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಎಫ್‌ಎಸ್‌ಎಲ್ ತಂಡ ಸ್ಥಳ ಪರಿಶೀಲನೆ ನಡೆಸುತ್ತಿದೆ. ಇದನ್ನೂ ಓದಿ: ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಹೊರಟವರ ಕಾರು ಅಪಘಾತ – ಇಬ್ಬರು ಸಾವು