ನವದೆಹಲಿ: ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿನ (Manifesto) ಭರವಸೆಗಳನ್ನು ಈಡೇರಿಸುವಾಗ ಅದು ಸಾರ್ವಜನಿಕರಿಗೆ ನೇರ ಅಥವಾ ಪರೋಕ್ಷ ಆರ್ಥಿಕ ಸಹಾಯಕ್ಕೆ ಕಾರಣವಾಗಬಹುದು. ಆದರೆ ಅದು ಪ್ರಜಾಪ್ರತಿನಿಧಿ ಕಾಯ್ದೆಯಡಿಯಲ್ಲಿ ಭ್ರಷ್ಟಾಚಾರವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
Advertisement
Advertisement
ರಾಜಕೀಯ ಪಕ್ಷವು ತನ್ನ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸುವಾಗ ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗುತ್ತವೆ. ಹಾಗಂತ ಅದು ಆ ಪಕ್ಷದ ಅಭ್ಯರ್ಥಿಯ ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ ಎಂಬ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ ಎಂದು ತನ್ನ ಆದೇಶದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ನಕ್ಸಲರಿಂದ ನಿರಂತರ ಬೆದರಿಕೆ- ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ ಮಾಂಝಿ ನಿರ್ಧಾರ
Advertisement
Advertisement
2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಗಳು ಸಾರ್ವಜನಿಕರಿಗೆ ನೇರ ಮತ್ತು ಪರೋಕ್ಷ ಆರ್ಥಿಕ ಸಹಾಯವಾಗಿದ್ದು, ಇದು ಭ್ರಷ್ಟ ಚುನಾವಣಾ ಅಭ್ಯಾಸವಾಗಿದೆ ಎಂದು ಶಶಾಂಕ್ ಜೆ ಶೀಧರ್ ಮೊದಲು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್‌ನಲ್ಲಿ ಅರ್ಜಿ ವಜಾ ಆದ ಬಳಿಕ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಇವಿಎಂ ಯಂತ್ರಗಳು ಏನು ಆಗದೇ ಹೋದರೆ ಸರಿ, ಜನ ನಮ್ಮ ಪರವಾಗಿದ್ದಾರೆ: ಡಿಕೆಶಿ