– ಹಗರಣ ಕುರಿತು ರಾಜ್ಯಪಾಲರು, ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ: ಬಿಜೆಪಿ ಶಾಸಕ
ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ. 50:50 ಅನುಪಾತದಲ್ಲಿ ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಲಾಗಿದೆ. ಇದರಿಂದ ಮುಡಾಗೆ 1,000 ಕೋಟಿ ರೂ.ಗಿಂತಲೂ ಹೆಚ್ಚು ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
Advertisement
ಮೈಸೂರಿನ ನಿರ್ಗಮಿತ ಡಿಸಿ ಡಾ.ಕೆ.ವಿ.ರಾಜೇಂದ್ರ ಮುಡಾ ಹಗರಣದ ಬಗ್ಗೆ ಕಳೆದ ನವೆಂಬರ್‌ನಲ್ಲೇ ರಾಜ್ಯ ಸರ್ಕಾರಕ್ಕೆ ಬರೆದಿದ್ದ ಪತ್ರ ಈಗ ಬೆಳಕಿಗೆ ಬಂದಿದೆ. ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಿರುವುದರಿಂದ ಸರ್ಕಾರಕ್ಕೆ 1,000 ಕೋಟಿ ರೂ. ಗಿಂತಲೂ ಹೆಚ್ಚು ಆರ್ಥಿಕ ನಷ್ಟವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: T20 ಏಷ್ಯಾಕಪ್ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟ – ಕನ್ನಡತಿ ಶ್ರೇಯಾಂಕಾಗೆ ಸ್ಥಾನ!
Advertisement
Advertisement
ಪತ್ರದಲ್ಲಿ ಏನಿದೆ?
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಸುಧೀರ್ಘ ಪತ್ರದಲ್ಲಿ `ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವಾರು ಪ್ರಕರಣಗಳಲ್ಲಿ ಭೂ ಮಾಲೀಕರಿಗೆ ಪರಿಹಾರ ನೀಡಿಲ್ಲವೆಂದು, ಬದಲಿಯಾಗಿ ಅಭಿವೃದ್ಧಿ ಹೊಂದಿದ ಜಾಗದಲ್ಲಿ ಬೆಲೆಬಾಳುವ ಆಸ್ತಿಗಳನ್ನು ನೀಡಲಾಗಿದೆ. ನಿಯಮ ಬಾಹಿರವಾಗಿ 50:50 ಅನುಪಾತದಲ್ಲಿ ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಲಾಗಿದೆ. ಇದರಿಂದ ಪ್ರಾಧಿಕಾರಕ್ಕೆ ಹಾಗೂ ಸರ್ಕಾರಕ್ಕೆ ಸುಮಾರು 1,000 ಕೋಟಿ ರೂ.ಗಿಂತಲೂ ಹೆಚ್ಚು ಆರ್ಥಿಕ ನಷ್ಟವುಂಟಾಗಿದೆ. ಪ್ರಾಧಿಕಾರದ ಹಿಂದಿನ ಅಧ್ಯಕ್ಷರಾದ ಹೆಚ್.ವಿ ರಾಜೀವ್, ಯಶಸ್ವಿನಿ ಸೋಮಶೇಖರ್, ಹಿಂದಿನ ಆಯುಕ್ತರಾದ ಡಿ.ಬಿ ನಟೇಶ್, ಹಾಲಿ ಆಯುಕ್ತರಾದ ಜಿ.ಟಿ ದಿನೇಶ್ ಕುಮಾರ್, ವಿಶೇಷ ಭೂಸ್ವಾಧೀನಾಧಿಕಾರಿಗಳಾದ ಹರ್ಷವರ್ಧನ್, ವಿಷ್ಣುವರ್ಧನ ರೆಡ್ಡಿ ಮತ್ತು ಸಂಭಂಧ ಪಟ್ಟ ವಿಶೇಷ ತಹಶೀಲ್ದಾರರು ಬೇನಾಮಿ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
Advertisement
ರಾಜ್ಯಪಾಲರು, ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ:
ಮುಡಾ ಹಗರಣದ ಕುರಿತು ಬಿಜೆಪಿ ಶಾಸಕ ಶ್ರೀವತ್ಸ ಅವರು ರಾಜ್ಯಪಾಲರಿಗೆ ಹಾಗೂ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಸಾವಿರಾರು ಕೋಟಿ ಹಗರಣ ನಡೆದಿದೆ. ಕೂಡಲೇ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆ ಮಾಡುವಂತೆ ಪತ್ರ ಬರೆದು ಒತ್ತಾಯಿಸುತ್ತೇನೆ. ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಆಗ್ರಹಿಸುತ್ತೇನೆ. ಪತ್ರದೊಂದಿಗೆ ಹಗರಣಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನೂ ಕಳುಹಿಸಿಕೊಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಳಪೆ ಬ್ಯಾಟಿಂಗ್‌ಗೆ ಬೆಲೆತೆತ್ತ ʻಯಂಗ್ ಇಂಡಿಯಾʼ – ಜಿಂಬಾಬ್ವೆಗೆ 13 ರನ್‌ಗಳ ರೋಚಕ ಗೆಲುವು!
ಪ್ರಹ್ಲಾದ್ ಜೋಶಿ ಆರೋಪ:
ಮುಡಾ ನಿವೇಶನ ಹಗರಣ ರಾಜಕಿಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಬಿಜೆಪಿ ಹೈಕಮಾಂಡ್ ಕೂಡ ಅಖಾಡಕ್ಕಿಳಿದಿದೆ. ಬಿಜೆಪಿ ಅವಧಿಯಲ್ಲಿ ಏನೆಲ್ಲಾ ಆಗಿತ್ತು? ಎಷ್ಟು ನಿವೇಶನ ಹಂಚಲಾಗಿದೆ. ಮಾಹಿತಿ ಕೊಡಿ ಎಂದು ಕೇಳಿದೆ. ಇನ್ನು, ಸಿಎಂ ಮತ್ತು ಅವರ ಪುತ್ರನ ಅನುಮತಿ ಇಲ್ಲದೇ ಇದೆಲ್ಲಾ ನಡೆಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಇದನ್ನೂ ಓದಿ: ಅಂದುಕೊಂಡಷ್ಟು ಮಳೆಯಾಗಿಲ್ಲ, ಕೃಷಿಗೆ ಸದ್ಯಕ್ಕೆ ನೀರು ಹರಿಸೋದಿಲ್ಲ: ಸಚಿವ ಚಲುವರಾಯಸ್ವಾಮಿ