– ಕಟೌಟ್ ಹಾಕಿಸಿದ ಕೈ ನಾಯಕ ಅಮಾನತು
ಲಕ್ನೋ: ರಾಜಕೀಯ ತಂತ್ರಗಾರ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲಲು ಯೋಜನೆ ರೂಪಿಸಿದ್ದ ಪ್ರಶಾಂತ್ ಕಿಶೋರ್ ಅವರನ್ನು ಹುಡುಕಿಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೋಸ್ಟರ್ ಪ್ರಕಟಿಸಿದ್ದಕ್ಕೆ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕರೊಬ್ಬರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
Advertisement
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ಕಾಣಲು ಪ್ರಶಾಂತ್ ಕಿಶೋರ್ ಅವರ ತಂತ್ರಗಾರಿಕೆಯೇ ಕಾರಣ. ಫಲಿತಾಂಶ ಬಳಿಕ ಅವರು ನಾಪತ್ತೆಯಾಗಿದ್ದು ಅವರನ್ನು ಹುಡುಕಿಕೊಟ್ಟವರಿಗೆ ಐದು ಲಕ್ಷ ರೂ. ಬಹುಮಾನವನ್ನು ನೀಡಲಾಗುವುದು ಎಂದು ಬರೆದಿರುವ ಕಟೌಟನ್ನು ರಾಜೇಶ್ ಸಿಂಗ್ ಎಂಬವರು ಲಕ್ನೋದಲ್ಲಿರುವ ಕಚೇರಿಯ ಮುಂದುಗಡೆ ಹಾಕಿದ್ದರು.
Advertisement
Advertisement
ಈ ವಿಚಾರ ಪಕ್ಷದ ನಾಯಕರಿಗೆ ತಿಳಿದ ಕೂಡಲೇ ಶನಿವಾರ ಕಟೌಟನ್ನು ತೆಗೆಯಲಾಗಿತ್ತು. ಈಗ ಈ ಕಟೌಟ್ ಹಾಕಿ ಪ್ರಶಾಂತ್ ಕಿಶೋರ್‍ಗೆ ಅವಮಾನ ಮಾಡಿದ್ದಕ್ಕೆ ಪಕ್ಷದಿಂದ ರಾಜೇಶ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ.
Advertisement
“ನಾನು ಏನು ಮಾಡಿದ್ದೇನೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ನಮ್ಮ ಕಾರ್ಯಕರ್ತರು ನಿಯತ್ತಿನಿಂಂದ ಕೆಲಸ ಮಾಡಿ ಪಕ್ಷವನ್ನು ಕಟ್ಟಿದ್ದರು. ಆದರೆ ನಮ್ಮ ಅಭಿಪ್ರಾಯಗಳನ್ನು ಪರಿಗಣನೆಗೆ ತೆಗೆದುಕೊಳ್ಳದೇ ನಿರ್ಲಕ್ಷಿಸಲಾಯಿತು. ಪ್ರಶಾಂತ್ ಕಿಶೋರ್ ನಂತಹ ಕನ್ಸಲ್ಟೆಂಟ್ ವ್ಯಕ್ತಿಯನ್ನು ಉತ್ತರಪ್ರದೇಶಕ್ಕೆ ತಂದ ಕಾರಣ ಕಾಂಗ್ರೆಸ್ ಭಾರೀ ಸೋಲಾಗಿದೆ” ಎಂದು ರಾಜೇಶ್ ಸಿಂಗ್ ಪ್ರಶಾಂತ್ ಕಿಶೋರ್ ವಿರುದ್ಧ ಕಿಡಿಕಾರಿದ್ದಾರೆ.
2 ದಶಕಗಳ ಉತ್ತರಪ್ರದೇಶ ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದ ರಾಜೇಶ್ ಸಿಂಗ್ 4 ಬಾರಿ ಪಕ್ಷದ ಕಾರ್ಯದರ್ಶಿ ಹುದ್ದೆಯನ್ನು ನಿರ್ವಹಿಸಿದ್ದರು. ಆದರೆ ಮತ್ತೊಂದು ಕಡೆ ಪ್ರಶಾಂತ್ ಕಿಶೋರ್ ಅವರನ್ನು ಪಂಜಾಬ್ ಸಿಎಂ ಹೊಗಳಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಸಿಂಗ್, ನಮ್ಮ ಗೆಲುವಿನಲ್ಲಿ ಪ್ರಶಾಂತ್ ಕಿಶೋರ್ ಪಾತ್ರ ದೊಡ್ಡದು ಇದೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮೋದಿ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ನಂತರ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡು ಗೆಲುವಿನ ರೂವಾರಿಯಾಗಿದ್ದರು. ಈ ಕಾರಣಕ್ಕಾಗಿ ಪ್ರಶಾಂತ್ ಕಿಶೋರ್ ಅವರಿಗೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಚುನಾವಣೆ ಉಸ್ತುವಾರಿ ವಹಿಸಿದ್ದರು.
ಪ್ರಶಾಂತ್ ಕಿಶೋರ್ ಅವರನ್ನು ನೇಮಿಸಿದ್ದಕ್ಕೆ ಆರಂಭದಲ್ಲೇ ಪಕ್ಷದ ಹಿರಿಯ ನಾಯಕರು ಅಪಸ್ವರ ಎತ್ತಿದ್ದರು. ನಮ್ಮ ಮಾತಿಗೆ ಬೆಲೆ ನೀಡದೇ ಪ್ರಶಾಂತ್ ಕಿಶೋರ್ ಮಾತಿಗೆ ಹೈಕಮಾಂಡ್ ಬೆಲೆ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಹಿರಿಯ ನಾಯಕರೇ ಅಸಮಾಧಾನ ಹೊರ ಹಾಕಿದ್ದರೂ ಎಸ್‍ಪಿ, ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲು ಪ್ರಶಾಂತ್ ಕಿಶೋರ್ ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ ಮೋದಿ ಅಲೆಯಲ್ಲಿ ಎಸ್‍ಪಿ ಮತ್ತು ಕಾಂಗ್ರೆಸ್ ಕೊಚ್ಚಿಕೊಂಡು ಹೋಗಿತ್ತು. ಈ ಮೂಲಕ ಎರಡು ಚುನಾವಣೆಯಲ್ಲಿ ಯಶಸ್ವಿಯಾಗಿದ್ದ ಪ್ರಶಾಂತ್ ಕಿಶೋರ್‍ಗೆ ಮೂರನೇ ಚುನಾವಣೆಯಲ್ಲಿ ಸೋಲಾಗಿದೆ.
ಮೇಲ್ವರ್ಗದ ಮತಗಳನ್ನು ಸೆಳೆಯುವ ಉದ್ದೇಶ ಮತ್ತು ಕಾಂಗ್ರೆಸ್ ಯಾವಾಗಲೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪಕ್ಷ ಎನ್ನುವ ಕಲ್ಪನೆಯಿಂದ ಹೊರಬರಲು ಪ್ರಶಾಂತ್ ಕಿಶೋರ್ ಅವರು ಈ ಬಾರಿ ಬ್ರಾಹ್ಮಣ ಸಮುದಾಯ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಶೀಲಾ ದೀಕ್ಷಿತ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಸಲಹೆ ನೀಡಿದ್ದರು. ಈ ಸಲಹೆಗೆ ಕಾಂಗ್ರೆಸ್ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು.
ಲೋಕಸಭಾ ಚುನಾವಣೆಯ ವೇಳೆ ಪ್ರಶಾಂತ್ ಕಿಶೋರ್ ಸಲಹೆಯಂತೆ ಚಾಯ್‍ಪೇ ಚರ್ಚಾ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಬಿಹಾರದಲ್ಲಿ ಮಹಾಘಟ್‍ಬಂಧನ್ ಮೈತ್ರಿಕೂಟ ನಡೆಸಿ ನಿತೀಶ್ ಕುಮಾರ್ ಅವರನ್ನು ಪ್ರಶಾಂತ್ ಕಿಶೋರ್ ಗೆಲ್ಲಿಸಿದ್ದರು.