ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

Public TV
2 Min Read
Nitin Gadkari

ನವದೆಹಲಿ: ಕಾರಿನಲ್ಲಿ ಹಿಂದೆ ಕುಳಿತು ಸೀಟ್ ಬೆಲ್ಟ್ ಧರಿಸದೇ ಇರುವವರಿಗೆ ದಂಡ ವಿಧಿಸುವ ಕ್ರಮವನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಕಾರು ಅಪಘಾತದಲ್ಲಿ ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮೃತಪಟ್ಟ ಎರಡು ದಿನಗಳ ನಂತರ ಈ ಕ್ರಮಕ್ಕೆ ಕೇಂದ್ರ ಸಚಿವರು ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಹಾವಳಿ: ನಾಳೆ ಸಾಫ್ಟ್‌ವೇರ್ ಕಂಪನಿಗಳ ಜತೆ ಸಭೆ

tumakuru accident 5
ಸಾಂದರ್ಭಿಕ ಚಿತ್ರ

ಈಗಾಗಲೇ ಹಿಂದಿನ ಸೀಟಿನಲ್ಲಿರುವವರೂ ಸೀಟ್‌ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಆದರೆ ಜನರು ಅದನ್ನು ಅನುಸರಿಸುತ್ತಿಲ್ಲ. ಹಾಗಾಗಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಹಿಂಬದಿ ಸೀಟಿನಲ್ಲಿರುವವರು ಕಡ್ಡಾಯವಾಗಿ ಬೆಲ್ಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ದಂಡ ವಸೂಲಿ ಮಾಡುವುದು ಸರ್ಕಾರದ ಉದ್ದೇಶವಲ್ಲ. ಜಾಗೃತಿ ಮೂಡಿಸುವುದು ನಮ್ಮ ಉದ್ದೇಶ. ಈ ನೀತಿಯ ಹಿಂದೆ 2024ರ ವೇಳೆಗೆ ರಸ್ತೆ ಅಪಘಾತಗಳನ್ನು ಶೇ.50 ರಷ್ಟು ಕಡಿಮೆ ಮಾಡುವ ಗುರಿಯೂ ಇದೆ. ಹಾಗಾಗಿ ನಿಗಾ ವಹಿಸಲು ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಕನಿಷ್ಠ ದಂಡ 1 ಸಾವಿರ ರೂಪಾಯಿ ಇರುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ

Nitin Gadkari

ಇದೇ ವೇಳೆ ಕಳೆದ 5 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ 59 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 80 ಸಾವಿರದಷ್ಟು ಜನ ಗಂಭೀರ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪೊಲೀಸರು ಇಂದು ಬಿಡುಗಡೆ ಮಾಡಿದ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದ್ದಾರೆ.

ಅಲ್ಲದೇ `ಭಾರತದಲ್ಲಿ ರಸ್ತೆ ಅಪಘಾತಗಳು – 2020′ ಎಂಬ ಶೀರ್ಷಿಕೆಯ ವರದಿಯ ಪ್ರಕಾರ, ರಸ್ತೆ ಅಪಘಾತದಲ್ಲಿ ಉಂಟಾದ ಶೇ.11ಕ್ಕಿಂತ ಹೆಚ್ಚು ಸಾವುಗಳು ಸೀಟ್ ಬೆಲ್ಟ್ ಬಳಸದ ಕಾರಣದಿಂದ ಸಂಭವಿಸಿದ್ದರೇ, ಹೆಲ್ಮೆಟ್ ಧರಿಸದ ಕಾರಣದಿಂದ ಶೇ.30.1 ರಷ್ಟು ಸಾವುಗಳು ಸಂಭವಿಸಿದೆ. ಶೇ.26 ರಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ವರದಿಯನ್ನು ವಿವರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *