Connect with us

Bengaluru City

ಆತ್ಮಹತ್ಯೆಗೆ ಯತ್ನಿಸಿದ್ದ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲು

Published

on

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ನಿನ್ನೆ ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಸಿದ್ದರು. ಖುಡಲೇ ಅವರನ್ನು ಮನೆಯವರು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಎಂಎಲ್ ಸಿ ರಿಪೋರ್ಟ್ ರವಾನೆ ಮಾಡಲಾಗಿದ್ದು, ಈ ವರದಿ ಸದಾಶಿವನಗರ ಪೊಲೀಸರ ಕೈ ಸೇರಿದೆ. ವರದಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ದಾಖಲಾಗಿದೆ. ಅಲ್ಲದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸದ್ಯ ಮಾತಾನಾಡಲಿಕ್ಕೆ ಶಕ್ತನಲ್ಲ ಎಂದು ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: ಕೌಟುಂಬಿಕವಾಗಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಂತೋಷ್ ಪತ್ನಿ

ಅಸ್ಪತ್ರೆಯ ಎಂಎಲ್ ಸಿ ರಿಪೋರ್ಟ್ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ. ಎನ್ ಆರ್ ಸಂತೋಷ್ ಗುಣಮುಖನಾದ ಬಳಿಕ ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಇಂದು ಬೆಳಗ್ಗೆ 11 ಗಂಟೆಗೆ ಎಮ್ ಎಸ್ ರಾಮಯ್ಯ ಆಸ್ಪತ್ರೆ ವೈದ್ಯರು ಸಂತೋಷ್ ಆರೋಗ್ಯ ಕುರಿತು ಸುದ್ದಿ ಗೊಷ್ಠಿ ನಡೆಸಲಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಸಂತೋಷ್ ಪತ್ನಿ ಜಾಹ್ನವಿ ಮಾತನಾಡಿ, ರಾಜಕೀಯ ಒತ್ತಡದಿಂದ ಸಂತೋಷ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಗಳು ಇಲ್ಲ ಎಂದಿದ್ದಾರೆ.

Click to comment

Leave a Reply

Your email address will not be published. Required fields are marked *