ಶಾಲೆಯಲ್ಲಿ ಮಕ್ಕಳು ಟಾಯ್ಲೆಟ್‌ ಸ್ವಚ್ಛ ಮಾಡಿದ್ರೆ ಶಿಕ್ಷಕರ ಮೇಲೆ ಕೇಸ್‌

Public TV
1 Min Read
rural school

ಬೆಂಗಳೂರು: ಶಾಲಾ ಮಕ್ಕಳಿಂದ (Students) ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ (Teachers) ಮೇಲೆಯೇ ಎಫ್‌ಐಆರ್‌ (FIR) ದಾಖಲಿಸಲಾಗುವುದು ಶಿಕ್ಷಣ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.

ಶಾಲಾ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ (Toilet Clenaing) ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ.

ಶೌಚಾಲಯ ಕ್ಲೀನ್ ಮಾಡಿಸುವ ಶಿಕ್ಷಕರ ವಿರುದ್ದ ಮತ್ತು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ:ಯುವತಿಯೆಂದು ಯುವಕನಿಗೆ ಅಶ್ಲೀಲ ಮೆಸೇಜ್ – ಕಾಮುಕನಿಗೆ ಬಿತ್ತು ಧರ್ಮದೇಟು

fir action if students made to clean toilets karnataka education department order 1

ಆದೇಶದಲ್ಲಿ ಏನಿದೆ?
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ. ಇದನ್ನೂ ಓದಿ: ಅಮೆರಿಕಕ್ಕೆ ಭಾರತದಿಂದ 5 ವಿಮಾನ ಭರ್ತಿ ಐಫೋನ್‌ ಕಳುಹಿಸಿದ ಆಪಲ್‌

ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ ಆಕ್ಷೇಪಿಸಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಉಲ್ಲೇಖಿತ ಪತ್ರದಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ಹಿಸುವ ಕುರಿತು ತಿಳಿಸಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತೊಮ್ಮೆ ಎಚ್ಚರಿಸಲಾಗಿದೆ.

Share This Article