Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲೆಯಲ್ಲಿ ಮಕ್ಕಳು ಟಾಯ್ಲೆಟ್‌ ಸ್ವಚ್ಛ ಮಾಡಿದ್ರೆ ಶಿಕ್ಷಕರ ಮೇಲೆ ಕೇಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಲೆಯಲ್ಲಿ ಮಕ್ಕಳು ಟಾಯ್ಲೆಟ್‌ ಸ್ವಚ್ಛ ಮಾಡಿದ್ರೆ ಶಿಕ್ಷಕರ ಮೇಲೆ ಕೇಸ್‌

Bengaluru City

ಶಾಲೆಯಲ್ಲಿ ಮಕ್ಕಳು ಟಾಯ್ಲೆಟ್‌ ಸ್ವಚ್ಛ ಮಾಡಿದ್ರೆ ಶಿಕ್ಷಕರ ಮೇಲೆ ಕೇಸ್‌

Public TV
Last updated: April 7, 2025 9:12 am
Public TV
Share
1 Min Read
rural school
SHARE

ಬೆಂಗಳೂರು: ಶಾಲಾ ಮಕ್ಕಳಿಂದ (Students) ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ (Teachers) ಮೇಲೆಯೇ ಎಫ್‌ಐಆರ್‌ (FIR) ದಾಖಲಿಸಲಾಗುವುದು ಶಿಕ್ಷಣ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ.

ಶಾಲಾ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವಂತಿಲ್ಲ (Toilet Clenaing) ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಹೀಗಿದ್ದರೂ ರಾಜ್ಯದ ಕೆಲ ಶಾಲೆಗಳಲ್ಲಿ ಪ್ರಕರಣ ವರದಿಯಾದ ಬೆನ್ನಲ್ಲೇ ಮತ್ತೊಮ್ಮೆ ಶಿಕ್ಷಣ ಇಲಾಖೆ ಆದೇಶ ಪ್ರಕಟಿಸಿದೆ.

ಶೌಚಾಲಯ ಕ್ಲೀನ್ ಮಾಡಿಸುವ ಶಿಕ್ಷಕರ ವಿರುದ್ದ ಮತ್ತು ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ:ಯುವತಿಯೆಂದು ಯುವಕನಿಗೆ ಅಶ್ಲೀಲ ಮೆಸೇಜ್ – ಕಾಮುಕನಿಗೆ ಬಿತ್ತು ಧರ್ಮದೇಟು

fir action if students made to clean toilets karnataka education department order 1

ಆದೇಶದಲ್ಲಿ ಏನಿದೆ?
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಕಡ್ಡಾಯವಾಗಿ ಮಾಡಿಸಬಾರದೆಂದು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಈಗಾಗಲೇ ಉಲ್ಲೇಖಿತ ಸುತ್ತೋಲೆಯ ಮೂಲಕ ತಿಳಿಸಲಾಗಿದ್ದರೂ ಸಹ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ. ಇದನ್ನೂ ಓದಿ: ಅಮೆರಿಕಕ್ಕೆ ಭಾರತದಿಂದ 5 ವಿಮಾನ ಭರ್ತಿ ಐಫೋನ್‌ ಕಳುಹಿಸಿದ ಆಪಲ್‌

ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸಹ ಇಂತಹ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಿ ಆಕ್ಷೇಪಿಸಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಅಲ್ಲದೆ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಉಲ್ಲೇಖಿತ ಪತ್ರದಲ್ಲಿ ಶೌಚಾಲಯ ಸ್ವಚ್ಛತೆಯನ್ನು ನಿರ್ಹಿಸುವ ಕುರಿತು ತಿಳಿಸಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತೊಮ್ಮೆ ಎಚ್ಚರಿಸಲಾಗಿದೆ.

TAGGED:FIRstudentsteacherstoiletಎಫ್‍ಐಆರ್ಶಿಕ್ಷಕರುಶಿಕ್ಷಣ ಇಲಾಖೆಶೌಚಾಲಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
17 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
26 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
50 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
53 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?