ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣಗೌಡ (Narayana Gowda) ಬಣದ 8 ರಿಂದ 12 ಮಂದಿ ಕಾರ್ಯಕರ್ತರ ವಿರುದ್ಧ ಎಫ್‍ಐಆರ್ (FIR) ದಾಖಲಿಸಲಾಗಿದೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆ (Hirebagewadi Police Station) ಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬೆಳಗಾವಿ ಪ್ರವೇಶಕ್ಕೆ ಅವಕಾಶ ಸಿಗದಕ್ಕೆ ಹಿರೇಬಾಗೇವಾಡಿ ಟೋಲ್‍ಗೇಟ್ ಬಳಿ ಕಲ್ಲು ತೂರಾಟ ನಡೆಸಲಾಗಿತ್ತು. ಮಹಾರಾಷ್ಟ್ರ ನೋಂದಣಿಯ ಲಾರಿಯ ಮೇಲೆ ಕಲ್ಲು ತೂರಿ ಗಾಜು ಪುಡಿ ಪುಡಿ ಮಾಡಲಾಗಿತ್ತು. ಇದನ್ನೂ ಓದಿ: ಒಂದೇ ವರ್ಷದಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಭಾರೀ ಏರಿಕೆ!
ಅಲ್ಲದೇ ಈ ವೇಳೆ ಕೆಲವು ವಾಹನಗಳ ನಂಬರ್ ಪ್ಲೇಟ್ ಕಿತ್ತು, ಮಸಿ ಬಳಿದ ಆರೋಪ ಕೇಳಿಬಂದಿತ್ತು. ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕೃತ್ಯ ಎಸಗಿ ತಕ್ಷಣವೇ ಗುಂಪಿನಲ್ಲಿ ಓಡಿ ಹೋಗಿದಕ್ಕೆ ಗುರುತು ಪತ್ತೆ ಆಗದ್ದಕ್ಕೆ ಬಂಧನ ಸಾಧ್ಯವಾಗಿಲ್ಲ.
ಐಪಿಸಿ ಸೆಕ್ಷನ್ 143, 147, 341, 427, 149 ಅಡಿ 12 ಜನರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಹಿರೇಬಾಗೇವಾಡಿ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.