ಬೆಳಗಾವಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ (Belagavi Protest) ನಡೆಸಿದ ಬಳಿಕ ಇಲ್ಲಿನ ಕಾಂಗ್ರೆಸ್ ಭವನಕ್ಕೆ ನುಗ್ಗಿದ 27 ಬಿಜೆಪಿ ಕಾರ್ಯಕರ್ತರ (BJP Workers) ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಭವನಕ್ಕೆ (Congress Bhavan) ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ 27 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಬಿಜೆಪಿ ನಾಯಕರ ಹೈಡ್ರಾಮಾ- ಸಿಎಂ, ಸಚಿವರ ಕಚೇರಿಗೆ ಬೀಗ ಹಾಕಲು ಯತ್ನ
Advertisement
Advertisement
ಬೆಳಗಾವಿ ಬಿಜೆಪಿ ಘಟಕದ ನಗರ ಅಧ್ಯಕ್ಷೆ ಗೀತಾ ಉಮಾಕಾಂತ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ ಸೇರಿ 27 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 147, 341, 283, 448 ಹಾಗೂ 149 ಅಡಿ 27 ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಶ್ರೀಕೃಷ್ಣ ಪಾಂಡವರಿಗಾಗಿ 5 ಗ್ರಾಮಗಳನ್ನ ಕೇಳಿದ, ನಾವು 3 ಸ್ಥಳ ಕೇಳುತ್ತಿದ್ದೇವೆ – ʻಮಹಾಭಾರತʼದ ಪಾಠ ಹೇಳಿದ ಯೋಗಿ
Advertisement
Advertisement
ಬುಧವಾರ (ಫೆ.7) ಬೆಳಗ್ಗೆ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರು, ಪ್ರತಿಭಟನೆ ನಂತರ ಡಿಸಿ ಡಾ. ನಿತೇಶ ಪಾಟೀಲ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಇದಾದ ನಂತರ ಡಿಸಿ ಕಚೇರಿಯಿಂದ ಕಾಂಗ್ರೆಸ್ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ 27 ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಕುಂಬಾರಪೇಟೆಯಲ್ಲಿ ಡಬಲ್ ಮರ್ಡರ್ – ಕೊಲೆ ಮಾಡಿ ತಾನೇ ಶರಣಾದ ಭೂಪ