ಸಾಯಿಬಾಬಾನ 3ನೇ ಅವತಾರ ಅಂತ ಜನರಿಗೆ ವಂಚನೆ – ನಕಲಿ ಬಾಬಾ ವಿರುದ್ಧ FIR

Advertisements

ರಾಮನಗರ: ಸಾಯಿಬಾಬಾನ 3ನೇ ಅವತಾರ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ವ್ಯಕ್ತಿ ವಿರುದ್ಧ ರಾಮನಗರ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

Advertisements

ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಅಕಾರಾಂ ಸರಗಾರ್ ಕಳೆದ 8 ತಿಂಗಳ ಹಿಂದೆ ಚನ್ನಪಟ್ಟಣಕ್ಕೆ ಬಂದಿದ್ದನು. ಈ ವೇಳೆ ತಾನು ಪ್ರೇಮ ಸಾಯಿ, ದೇವ ಮಾನವ ಎಲ್ಲರ ಸಮಸ್ಯೆಯನ್ನು ಪರಿಹರಿಸುತ್ತೇನೆ ಎಂದು ಹೇಳಿಕೊಂಡು ಜನರನ್ನು ನಂಬಿಸುತ್ತಿದ್ದನು. ಸಿಂಧೂ ಎಂಬುವವರ ತೋಟದ ಮನೆಯಲ್ಲಿ ಪ್ರತಿನಿತ್ಯ ಭಜನೆ, ಪೂಜೆ ಮಾಡಿ ಹಣ ವಸೂಲಿ ಮಾಡುತ್ತಿದ್ದನು.  ಇದನ್ನೂ ಓದಿ: ಹೆರಿಗೆ ಸಮಯದಲ್ಲಿ ಮಗು ಸಾವನ್ನಪ್ಪಿದರೆ ಸರ್ಕಾರಿ ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ: ಕೇಂದ್ರ

Advertisements

ಶ್ರೀ ಪ್ರೇಮ ಸ್ವರೂಪಿಣಿ ಸಾಯಿ ಸೇವಾ ಟ್ರಸ್ಟ್ ಹೆಸರಲ್ಲಿ ಇಲ್ಲಿಯವರೆಗೂ ಆರೋಪಿ ಸುಮಾರು 1.5 ಕೋಟಿ ರೂ. ಹಣ ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ತೋಟದ ಮನೆಯನ್ನೇ ತನ್ನ ಹೆಸರಿಗೆ ಬರೆದುಕೊಡುವಂತೆ ಸಿಂಧೂ ಅವರಿಗೆ ನಿತ್ಯ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಮಹಿಳೆ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರುದಾಖಲಿಸಿದ್ದು, ಪ್ರಕರಣ ಸಂಬಂಧ 7 ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಸಚಿನ್ ಅಕಾರಾಂ ಸರಗಾರ್ ಸಹಕರಿಸುತ್ತಿದ್ದ ವಿನಾಯಕ ರಾಜ್, ಸಾಯಿರಾಜ್, ಜಯಂತ್, ಯಶೋದಮ್ಮ, ಉಮಾಶಂಕರ್, ಪ್ರಶಾಂತ್ ಎನ್ನುವರರ ವಿರುದ್ಧ ಕೂಡ ದೂರು ದಾಖಲಾಗಿದೆ. ಸದ್ಯ ಹಣದ ಜೊತೆಗೆ ಎಸ್ಕೇಪ್ ಆಗಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಯುಕೆ ಹಿಂದಿಕ್ಕಿದ ಭಾರತ – ಈಗ ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯ ದೇಶ

Advertisements

Live Tv

Advertisements
Exit mobile version