ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ಪ್ರವಾದಿ ಮಹಮ್ಮದ್ ಪೈಗಂಬರ್ (Mohammad Paigambar) ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ.
ಏ.7 ರಂದು ಹುಬ್ಬಳ್ಳಿಯ (Hubballi) ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಹನ್ನಾನ್ ಎಂಬವರು ದೂರು ದಾಖಲಿಸಿದ್ದರು. ಇದನ್ನೂ ಓದಿ: ಇವಿಎಂ ದುರ್ಬಳಕೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಮೋಸ – ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ
ಯತ್ನಾಳ್ ಅವರು `ಭಾಷಣದ ವೇಳೆ, `ದಿ.ಬಾಳಾಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ’ ಎಂದಿದ್ದರು. ಈ ರೀತಿ ಮಾತನಾಡಿರುವುದು ಅಪಮಾನಕಾರಿ. ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಯತ್ನಾಳ್ ಹೇಳಿಕೆ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ವೃತ್ತಿ ಜೀವನದ ಕೊನೆಯ ದಿನ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಮುಖ್ಯಸ್ಥ!