ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿದಾನಸೌಧದಲ್ಲಿ ಸಿಕ್ಕ 4 ಕೋಟಿ ಹಣ ಸಂಬಂಧ ಎಫ್‍ಐಆರ್ ದಾಖಲಾಗೋ ಸಾಧ್ಯತೆ ಇದೆ ಎನ್ನಲಾಗಿದೆ.
ಯಡಿಯೂರಪ್ಪ ಆಪ್ತ ವಕೀಲ ಸಿದ್ಧಾರ್ಥ ಬಳಿ ಸಿಕ್ಕಿದ್ದ ಹಣಕ್ಕೆ ಸಂಬಂಧಿಸಿದಂತೆ ಎಸಿಬಿನಲ್ಲಿ ಎಫ್‍ಐಆರ್ ದಾಖಲಾಗೋ ಸಾಧ್ಯತೆ ಇದೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೂಡಾ ಪ್ರಕರಣ ದಾಖಲಾಗಿತ್ತು.
Advertisement
ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ವಿಧಾನಸೌಧದಲ್ಲಿ ಸಿಕ್ಕ ಹಣದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದರು. ಈ ದೂರಿನ ಅನ್ವಯ ಮುಂದಿನ ಕ್ರಮ ಕೈಗೊಳ್ಳೋ ನಿಟ್ಟಿನಲ್ಲಿ ಕೇಂದ್ರದಿಂದ ಎಸಿಬಿಗೆ ಪತ್ರ ಬಂದಿದೆ. ಈ ಹಿನ್ನಲೆ ಇಂದು ಅಥವಾ ನಾಳೆ ಎಫ್‍ಐಆರ್ ದಾಖಲಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.
Advertisement
https://www.youtube.com/watch?v=e1lr_aCAWhk