Breaking | ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್

Public TV
3 Min Read
HD Kumaraswamy 4

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ (Vijaya Tata) ಎಂಬುವರು ದೂರು ನೀಡಿದ್ದರು. ಈ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

HD Kumaraswamy and JDS Ramesh Gowda

FIR ನಲ್ಲಿ ಏನಿದೆ?
* 2018 ರಿಂದ ಜೆಡಿಎಸ್ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ
* ನನ್ನ ಕಾರ್ಯ ಅಭಿನಂಧಿಸಿ ಪಕ್ಷದ ಸೋಷಿಯಲ್ ಮೀಡಿಯಾ ವಿಂಗ್‌ಗೆ ಉಪಾಧ್ಯಕ್ಷನಾಗಿ ಮಾಡಿದ್ರು
* ನಾನು ಉಪಾಧ್ಯಕ್ಷನಾದ ಬಳಿಕ ದೇವೇಗೌಡರು, ‌ಕುಮಾರಸ್ವಾಮಿ ಸೇರಿ ಸಭೆ ಮಾಡಿರುತ್ತೇವೆ
* ಸಾಮಾಜಿಕ ಜಾಲತಾಣ ಸೇರಿದಂತೆ ಪಕ್ಷದ ಏಳಿಗೆ ಬಗ್ಗೆ ಚರ್ಚೆಗಳನ್ನ ನಡೆಸಿರುತ್ತೇವೆ
* 2019 ರಲ್ಲಿ ಮಂಡ್ಯ ಲೋಕಸಭಾ ಎಲೆಕ್ಷನ್ ಸಂಧರ್ಭದಲ್ಲಿ ನಿಖಿಲ್ ಪರವಾಗಿ ಸಾಕಷ್ಟು ಅಭಿಯಾನ ಮಾಡಿದ್ದೇವೆ
* ಈ ಅಭಿಯಾನಗಳಿಗೆ ನಾನು ವೈಯುಕ್ತಿಕವಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದೇನೆ
* ಇದಾದ ಬಳಿಕ ನಾನು ಕೆಲ ವರ್ಷಗಳಿಂದ ನನ್ನ ರಿಯಲ್ ಎಸ್ಟೇಟ್ ಉದ್ಯಮದ ಬಗ್ಗೆ ಗಮನ ಹರಿಸಿದ್ದೇ
* ಹೀಗಾಗಿ ಪಕ್ಷದ ಕಾರ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ
* ಕಳೆದ ಒಂದು ತಿಂಗಳಿನಿಂದ ನನ್ನ ಮನೆಗೆ ಆಗಮಿಸಿದ್ದ ಮಾಜಿ ಎಂಎಲ್‌ಸಿ ರಮೇಶ್ ಗೌಡ, ಪಕ್ಷದ ಕಾರ್ಯಗಳಲ್ಲಿ ಪುನಃ ತೊಡಗಿಸಿಕೊಳ್ಳುವಂತೆ ಕೋರಿದ್ರು.
* ಕುಮಾರಣ್ಣ ಪಕ್ಷದ ಸಂಘಟನೆಯ ಜವಾಬ್ಧಾರಿ ವಹಿಸಿಕೊಳ್ಳುವಂತೆ ಕೋರಿದ್ರು
* ರಮೇಶ್ ಗೌಡ 2024ರ ಆಗಸ್ಟ್ 24 ರಂದು ರಾತ್ರಿ 10 ಗಂಟೆಗೆ ಮನೆಗೆ ಆಗಮಿಸಿದ್ರು
* ನಮ್ಮ ಜೊತೆಯಲ್ಲಿ ಕೂತು ಊಟ ಮಾಡುತ್ತಾ ಚೆನ್ನಪಟ್ಟಣ ಉಪ ಚುನಾವಣೆ ಬಗ್ಗೆ ವಿವರಿಸತೊಡಗಿದ್ರು
* ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡೋದು ಅಂತಿಮವಾಗಿದ್ದು, ಈ ಬಾರಿ ಚುನಾವಣಾ ಕಾರ್ಯದಲ್ಲಿ ಸಕ್ರಿಯವಾಗಿರಲು ಮನವಿ ಮಾಡಿದ್ರು
* ಇದೇ ವೇಳೆ ತಮ್ಮ ಮೊಬೈಲ್ ನಿಂದ ಹೆಚ್.ಡಿ ಕುಮಾರಸ್ವಾಮಿ ಕರೆ ಮಾಡಿದ್ರು
* ಕುಮಾರಸ್ವಾಮಿ ಜೊತೆಯಲ್ಲಿ ಮಾತನಾಡುತ್ತಾ ರಮೇಶ್ ಗೌಡ ನಮ್ಮ ಮನೆಗೆ ಬಂದಿರೋದಾಗಿ ತಿಳಿಸಿದ್ರು
* ಆನಂತರ ನನಗೆ ಕುಮಾರಸ್ವಾಮಿ ಜೊತೆ ಮಾತನಾಡಲು ಫೋನ್ ಕೊಟ್ಟರು
* ಕುಶಲೋಪರಿ ವಿಚಾರಿಸಿದ ಕುಮಾರಸ್ವಾಮಿ ಚೆನ್ನಪಟ್ಟಣ ಉಪಚುನಾವಣೆ ಬಗ್ಗೆ ಪ್ರಸ್ತಾಪಿಸಿದ್ರು
* ಉಪಚುನಾವಣೆ ಅನಿವಾರ್ಯ ನಮಗೆ, ಖರ್ಚಿಗೆ 50 ಕೋಟಿ ರೂ. ಕೊಡಬೇಕಾಗುತ್ತೆ ಎಂದ್ರು
* ಸರ್ ನನ್ನ ಬಳಿ ಅಷ್ಟೊಂದು ಹಣವಿಲ್ಲ ಎಂದೆ
* ನನ್ನ ಮಾತಿನಿಂದ ಕೋಪಗೊಂಡ ಕುಮಾರಸ್ವಾಮಿ 50 ‌ಕೋಟಿ ರೆಡಿ ಮಾಡು ಇಲ್ಲದೇ ಹೋದ್ರೆ ನಾನೇನ್ ಮಾಡ್ತಿನೊ ಗೊತ್ತಿಲ್ಲ ಎಂದು ಬೆದರಿಕೆ ಹಾಕಿದ್ರು.
* ಬೆಂಗಳೂರಿನಲ್ಲಿ ರಿಯಲ್ ಎಷ್ಟೇಟ್ ಉದ್ಯಮ ನಡೆಸೋದು ಮಾತ್ರವಲ್ಲ ಬದುಕೋದು ಕಷ್ಟ ಎಂದು ಬೆದರಿಕೆ ಹಾಕಿದ್ರು
* ರಮೇಶ್ ಗೌಡ 50 ಕೋಟಿ ರೆಡಿ ಮಾಡಿಕೊಳ್ಳಿ ಜೊತೆಗೆ ದೇವಸ್ಥಾನ, ಶಾಲೆ ಕಟ್ಟಿಸುತ್ತಿದ್ದು ಅದಕ್ಕೆ 5 ಕೋಟಿ ನೀಡುವಂತೆ ಒತ್ತಾಯಿಸಿದ್ರು
* ಈ ಹಣ ನೀಡದೇ ಇದ್ರೆ ನಿಮಗೆ ತೊಂದರೆ ಎದುರಾಗುತ್ತೆ ಎಂದು ಧಮ್ಕಿ ಹಾಕಿದ್ರು
* ಇದಕ್ಕೆ ಸಂಬಂಧಿಸಿದಂತೆ ರಮೇಶ್‌ ಗೌಡ ಅವರು ವಾಟ್ಸಪ್ ಸಂದೇಶ ಕೂಡ ಕಳಿಸಿದರು
* ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ನನ್ನ ವಿರುದ್ಧ ಷಡ್ಯಂತ್ರ ರಚಿಸಿ ಹಣಕ್ಕಾಗಿ ಬೇಡಿಕೆ ಇಟ್ಟು ಜೀವಬೆದರಿಕೆ ಒಡ್ಡುತ್ತಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ.

ವಿಜಯ್ ಟಾಟಾ ನೀಡಿದ ದೂರಿನಲ್ಲಿ ಏನಿತ್ತು? 
ಚನ್ನಪಟ್ಟಣ ಉಪಚುನಾವಣೆಗೆ (Channapatna By Election) ನಿಖಿಲ್ ಕುಮಾರಸ್ವಾಮಿ (Nikhil Kumaraswami) ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ.

ಮಾಜಿ ಎಂಎಲ್‌ಸಿ ರಮೇಶ್ ಗೌಡ 50 ಕೋಟಿ ರೂ. ಹಣ ಹೊಂದಿಸಿಕೊಡು. ನಾನು ದೇವಸ್ಥಾನ, ಶಾಲೆ ಅಭಿವೃದ್ಧಿ ಮಾಡುತ್ತಿದ್ದು ನನಗೂ 5 ಕೋಟಿ ರೂ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಹಣ ಕೊಡದೇ ಹೋದರೆ ನಿಮಗೂ ತೊಂದರೆಗಳು ಎದುರಾಗಲಿದೆ. ರಮೇಶ್ ಗೌಡ ನನಗೆ ಆಗಸ್ಟ್ 30, ಸೆಪ್ಟೆಂಬರ್ 06, ಮತ್ತು 11 ರಂದು ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ.

ಹೆಚ್‌ಡಿ ಕುಮಾರ ಸ್ವಾಮಿ ಮತ್ತು ರಮೇಶ್ ಗೌಡ ನನ್ನ ವಿರುದ್ಧ ಷಡ್ಯಂತ್ರ ಮಾಡಿ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಿ ಹೆಚ್ ಡಿ ಕುಮಾರಸ್ವಾಮಿ ಮತ್ತು ರಮೇಶ್ ಗೌಡ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

Share This Article