ಧಾರವಾಡ: ವಿ.ಡಿ ಸಾವರ್ಕರ್ ಅವರ ಭಾವಚಿತ್ರದ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿರುವಾಗಲೇ ಮತ್ತೊಂದು ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ವಿ.ಡಿ ಸಾವರ್ಕರ್ ಅವರ ಭಾವಚಿತ್ರಕ್ಕೆ ಧಾರವಾಡದಲ್ಲಿ ಬೆಂಕಿ ಹಚ್ಚಿ ಅಪಮಾನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Advertisement
ಸಾವರ್ಕರ್ ಫೋಟೋ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗ ದಳ ಮುಖಂಡ ಶಿವಾನಂದ ಸತ್ತಿಗೇರಿ ಅವರ ದೂರನ್ನು ಆಧರಿಸಿ ಧಾರವಾಡ ಉಪನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ ಸೇರಿದಂತೆ 12 ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನಾಟಕ ಆಡ್ತಿದ್ದಾರೆ – ಪ್ರಮೋದ್ ಮುತಾಲಿಕ್ ಕಿಡಿ
Advertisement
Advertisement
ನಿನ್ನೆ ಪ್ರತಿಭಟನೆ ನೆಪದಲ್ಲಿ ಸಾವರ್ಕರ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಮೊಟ್ಟೆ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಸಾವರ್ಕರ್ ಅವರ ಭಾವಚಿತ್ರವನ್ನೂ ಬೂಟುಗಾಲಿನಿಂದ ತುಳಿದು ಅಪಮಾನ ಮಾಡಿ, ಧಿಕ್ಕಾರ ಕೂಗಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಅಪ್ಪಚ್ಚು ರಂಜನ್ ಆಪ್ತ!
Advertisement
ಈ ಹಿನ್ನೆಲೆಯಲ್ಲಿ ಬಜರಂಗ ದಳದ ಮುಖಂಡ ಶಿವಾನಂದ ಸತ್ತಿಗೇರಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಅರವಿಂದ ಏಗನಗೌಡರ್ ಎ-1 ಆರೋಪಿಯಾಗಿದ್ದಾರೆ.