ಬೀದರ್: ಮನೆಯಲ್ಲಿರುವಂತೆ ಸೂಚಿಸಿದರೂ ಕೊರೊನಾ ಶಂಕಿತ ವ್ಯಕ್ತಿಯೊಬ್ಬ ಗ್ರಾಮದಲ್ಲಿ ತಿರುಗಾಡಿದ್ದಾನೆ. ಕೊರೊನಾ ತಡೆಗೆ ಮುಂಜಾಗೃತಾ ಕ್ರಮ ಪಾಲಿಸದ ಹಿನ್ನೆಲೆಯಲ್ಲಿ ಗೃಹ ಬಂಧನದಲ್ಲಿರುವ ವ್ಯಕ್ತಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.
ಚಿಟಗುಪ್ಪಾ ತಾಲೂಕಿನ ನಿರ್ಣಾ ಗ್ರಾಮದ ವ್ಯಕ್ತಿ ದುಬೈನಿಂದ ಆಗಮಿಸಿದ್ದರು. ಈ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಮುಂಜಾಗೃತಾ ಕ್ರಮಗಳನ್ನು ಪಾಲಿಸದೇ ಬೇಕಾ ಬಿಟ್ಟಿಯಾಗಿ ಗ್ರಾಮದಲ್ಲಿ ತಿರುಗಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಮನ್ನಾಎಖ್ಖೆಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement
Advertisement
ಐಪಿಸಿ ಸೆಕ್ಷನ್ 269(ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು), 270(ಸೋಂಕು ಹರಡುವವರ ವಿರುದ್ಧ ಕೇಸ್) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಮಾರ್ಚ್ 22 ರಂದು ದುಬೈನಿಂದ ಈ ವ್ಯಕ್ತಿ ಆಗಮಿಸಿದ್ದರು. ಬಳಿಕ ಪಿಎಸ್‍ಐ ಸುನಿತಾ ಹಾಗೂ ವೈದ್ಯಾಧಿಕಾರಿ ಚಂದ್ರಶೇಖರ್, ವ್ಯಕ್ತಿಯ ಮನೆಗೆ ಭೇಟಿ ನೀಡಿ, ಗೃಹ ಬಂಧನದಲ್ಲಿ ಇರಬೇಕು. ಗ್ರಾಮದಲ್ಲಿ ತಿರುಗಾಡಬಾರದು ಎಂದು ತಿಳಿ ಹೇಳಿದ್ದಾರೆ. ಅಲ್ಲದೆ ಕೊರೊನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮಗಳ ಬಗ್ಗೆ ತಿಳಿ ಹೇಳಿದ್ದರು.
Advertisement
ಆದರೂ ಈ ವ್ಯಕ್ತಿ ಮನೆಯಲ್ಲಿ ಇರದೇ ಗ್ರಾಮದ ಬಸವೇಶ್ವರ ವೃತ್ತ ಸೇರಿದಂತೆ ವಿವಿಧೆಡೆ ತಿರುಗಾಡಿದ್ದಾನೆ. ಈ ವ್ಯಕ್ತಿ ವರ್ತನೆ ನೋಡಿ ಆತಂಕದಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸದ್ಯ ಪ್ರಕರಣ ದಾಖಲಾಗಿದೆ.