ಬೆಂಗಳೂರು: ಬಿಗ್ ಬಾಸ್ ಸೀಸನ್ 11ರ ಸ್ವರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
View this post on Instagram
ಹೌದು. ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ಒಂದು ಮಸ್ತ್ ರೀಲ್ಸ್ ಮಾಡಿದ್ದಾರೆ. ಈ ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗು ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ. ಇದರ ಬೆನ್ನಲ್ಲೇ ಇಬ್ಬರ ಸ್ಪರ್ಧಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಹೆಂಡ, ಸಿಗರೇಟು ನೀಡಿದ್ರೆ ಇಷ್ಟಾರ್ಥ ಸಿದ್ಧಿ – ಕಾರವಾರದಲ್ಲೊಂದು ವಿಶಿಷ್ಟ ದೈವ ಜಾತ್ರೆ!
ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದು ಈಗ ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ ಈ ರೀಲ್ಸ್ ಅನ್ನು ʻಬುಜ್ಜಿʼ ಅನ್ನೋ ಇನ್‌ಸ್ಟಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ: IPL 2025: ಗಾಯಕ್ವಾಡ್, ರಚಿನ್ ಫಿಫ್ಟಿ ಆಟ – ಮುಂಬೈ ವಿರುದ್ಧ ಚೆನ್ನೈಗೆ 4 ವಿಕೆಟ್‌ಗಳ ಜಯ
ಈ ವಿಡಿಯೋ ಗಮನಿಸಿದ ಬಸವೇಶ್ವರ ನಗರ ಪೊಲೀಸರು, ಇಬ್ಬರ ವಿರುದ್ಧ ಆರ್ಮ್ಸ್ ಆಕ್ಟ್ ಆಡಿ ಕೇಸ್ ದಾಖಲಿಸಿದ್ದಾರೆ. ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಹಿಡಿದು ರಿಲ್ಸ್ ಮಾಡುವುದು, ಭಯದ ವಾತಾವರಣ ಸೃಷ್ಟಿಸೋದು ಕಾನೂನು ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಈ ಇಬ್ಬರ ಸ್ವರ್ಧಿಗಳ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.