– ಯುವ ಕಾಂಗ್ರೆಸ್ ಮುಖಂಡನಿಂದ ದೂರು
ಮೈಸೂರು: ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ (Muslims) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ( Pratap Simha) ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಉದಯಗಿರಿ ದಾಂಧಲೆ ಕೇಸ್- ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ
Advertisement
ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯರ ಭವಿಷ್ಯ, ಅದೃಷ್ಟ ಎರಡೂ ಗಟ್ಟಿಯಾಗಿದೆ: ಸಿಎಂ ಪರ ಜಿ.ಟಿ ದೇವೇಗೌಡ ಬ್ಯಾಟಿಂಗ್
Advertisement
ಮೈಸೂರು ಉದಯಗಿರಿ ಪೊಲೀಸ್ ಠಾಣೆ (Udayagiri Police Station) ಮೇಲೆ ಫೆ.10ರಂದು ಮುಸ್ಲಿಂ ಯುವಕರ ಗುಂಪು ದಾಂಧಲೆ ನಡೆಸಿತ್ತು. ಈ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ್ ಸಿಂಹ ಅವರು ಮುಸ್ಲಿಮರ ಬಗ್ಗೆ ಅವಹೇಳಕಾರಿ ಹೇಳಿಕೆ ನಿಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: MUDA Case | ಸಿಎಂ ಸೇಫ್, ಸೈಟ್ ಮಾಡಿಕೊಟ್ಟ ಅಧಿಕಾರಿಗಳು ಲಾಕ್ – ಇನ್ವೆಸ್ಟಿಗೇಷನ್ ಚಾಪ್ಟರ್-2