Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Latest

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Public TV
Last updated: March 4, 2026 1:04 pm
Public TV
Share
1 Min Read
Aga Syed Ruhullah Mehdi Kashmir MP
SHARE

ಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ (Ayatollah Ali Khamenei) ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕಾಶ್ಮೀರಿ ಸಂಸದರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸೋಷಿಯಲ್‌ ಮೀಡಿಯಾದಲ್ಲಿ ದಾರಿತಪ್ಪಿಸುವ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀನಗರ ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ (Aga Syed Ruhullah Mehdi) ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಮತ್ತು ವಿಶ್ವಾದ್ಯಂತ ಶಿಯಾ ಮುಸ್ಲಿಮರು ಆರಾಧಿಸುವ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ವಿಚಾರದಲ್ಲಿ ಕೇಂದ್ರದ ನಡೆಯನ್ನು ಸಂಸದ ಟೀಕಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಗಳು ಮತ್ತು ಸೋಮವಾರ ಭದ್ರತಾ ಸಿಬ್ಬಂದಿಯೊಂದಿಗಿನ ಘರ್ಷಣೆಯ ಸಂದರ್ಭದಲ್ಲಿ ಮಹಿಳಾ ಪ್ರತಿಭಟನಾಕಾರರ ಮೇಲೆ ನಡೆದ ಹಲ್ಲೆಯ ವೀಡಿಯೊಗಳನ್ನು ಮೆಹದಿ ಅಪ್‌ಲೋಡ್ ಮಾಡಿದ್ದರು. ಇದನ್ನೂ ಓದಿ: ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ

ಭಯ ಮೂಡಿಸುವ, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ, ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರಚೋದಿಸುವ ಉದ್ದೇಶದಿಂದ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು, ಕೃತ್ರಿಮ ಮತ್ತು ದಾರಿತಪ್ಪಿಸುವ ವಿಷಯಗಳ ಪ್ರಸರಣದ ಬಗ್ಗೆ ಮಾಹಿತಿಯ ಆಧಾರದ ಮೇಲೆ ಶ್ರೀನಗರ ಸಂಸದ ಮತ್ತು ನಗರದ ಮಾಜಿ ಮೇಯರ್ ಜುನೈದ್ ಅಜೀಮ್ ಮಾಟೂ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಪ್ಪು ಮಾಹಿತಿಯನ್ನು ಹರಡುವ ಇಂತಹ ಉದ್ದೇಶಪೂರ್ವಕ ಪ್ರಯತ್ನಗಳು ಶಾಂತಿ, ಭದ್ರತೆ ಮತ್ತು ಒಟ್ಟಾರೆ ಸ್ಥಿರತೆಗೆ ಗಂಭೀರ ಅಪಾಯವನ್ನುಂಟುಮಾಡುತ್ತವೆ ಎಂದು ಪೊಲೀಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿ ಜಾಲದ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಹಲವಾರು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ಶ್ರೀನಗರದ ಮೂರು ಪ್ರಮುಖ ಪತ್ರಿಕೆಗಳ ಫೇಸ್‌ಬುಕ್ ಪುಟಗಳನ್ನು ತೆಗೆದುಹಾಕಲಾಗಿದೆ. ಇದನ್ನೂ ಓದಿ: ಅಮೆರಿಕದ ದುಬಾರಿ ಶಸ್ತ್ರಾಸ್ತ್ರಗಳಿಗೆ ಇರಾನ್‌ನ ಅಗ್ಗದ ಡ್ರೋನ್‌ಗಳ ಸವಾಲು

TAGGED:Aga Syed Ruhullah Mehdiayatollah ali khameneiindiairankashmirಅಗಾ ಸೈಯದ್ ರುಹುಲ್ಲಾ ಮೆಹದಿಅಯತೊಲ್ಲಾ ಅಲಿ ಖಮೇನಿಇರಾನ್ಕಾಶ್ಮೀರಭಾರತ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
35 seconds ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
26 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?