ಚೆನ್ನೈ: ತಮಿಳಿನ ಖ್ಯಾತ ಹಿರಿಯ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಮಣಿರತ್ನಂ ನಿರ್ದೇಶನದ ಐತಿಹಾಸಿಕ ಕಥೆಯನ್ನು ಆಧರಿಸಿದ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಶೂಟಿಂಗ್ ಸಮಯದಲ್ಲಿ ಅವಘಡ ನಡೆದಿದೆ. ಈ ಸಿನಿಮಾದ ಶೂಟಿಂಗ್ ಮಾಡುತ್ತಿರಬೇಕಾದರೆ ಕುದುರೆ ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ಕುದುರೆಯ ಮಾಲೀಕರು ಮಣಿರತ್ನಂ ವಿರುದ್ಧ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ.
Advertisement
Advertisement
ಕುದುರೆಯೂ ಆಗಸ್ಟ್ 11ರಂದು ಸಾವನ್ನಪ್ಪಿದ್ದು, ಇವರ ವಿರುದ್ಧ ಎಫ್‍ಐಆರ್ ಅನ್ನು ಆಗಸ್ಟ್ 18 ರಂದು ದಾಖಲಿಸಲಾಗಿದ್ದು, ಆದರೆ ಪ್ರಕರಣ ತಡವಾಗಿ ಎಲ್ಲರಿಗೂ ತಿಳಿದಿದೆ. ಅನಿಮಲ್ ವೆಲ್‍ಫೇರ್ ಬೋರ್ಡ್ ಆಫ್ ಇಂಡಿಯಾ ಕುದುರೆ ಸಾವಿನ ಕುರಿತು ತನಿಖೆ ನಡೆಸಿದ್ದು, ಈ ಕುರಿತು ಹೈದರಾಬಾದ್ ಜಿಲ್ಲಾಧಿಕಾರಿಗಳಿಗೆ ತಿಳಿಸಿದೆ. ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ
Advertisement
Advertisement
ಏನಿದು ಘಟನೆ?
‘ಪೊನ್ನಿಯಿನ್ ಸೆಲ್ವನ್’ ಶೂಟಿಂಗ್ ಸೆಟ್‍ನಲ್ಲಿ ಯುದ್ಧದ ಸನ್ನಿವೇಶವನ್ನು ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ ಕುದುರೆಯು ನೆಲಕ್ಕೆ ಬಿದ್ದು ಪೆಟ್ಟಾಗಿ ಸಾವನ್ನಪ್ಪಿದೆ. ಆದರೆ ಈ ಕುರಿತು ತನಿಖೆ ನಡೆಯುತ್ತಿದ್ದು, ಶೂಟಿಂಗ್ ಬಿಸಿಲಿನಲ್ಲಿ ನಡೆಯುತ್ತಿದ್ದ ಪರಿಣಾಮ ಕುದುರೆಗೆ ಡಿಹೈಡ್ರೇಷನ್ ಆಗಿ ಸಾವನ್ನಪ್ಪಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ತಾಲಿಬಾನ್ ಸರ್ಕಾರ ರಚನೆಗೆ ಸಂತೋಷ ವ್ಯಕ್ತಪಡಿಸೋದು ಅನಾಗರೀಕತೆ: ನಾಸಿರುದ್ದೀನ್ ಶಾ
ಈ ವಿರುದ್ಧ ಅನಿಮಲ್ ವೆಲ್‍ಫೇರ್ ಅವರು ಸಿನಿಮಾದಲ್ಲಿ ಪ್ರಾಣಿಗಳನ್ನು ಬಳಸುವುದನ್ನು ತಡೆಯಬೇಕು. ನಿಜವಾದ ಪ್ರಾಣಿಗಳ ಬದಲಾಗಿದೆ ಸಿಜಿಐ ಅಥವಾ ಇತರೆ ತಂತ್ರಜ್ಞಾನಗಳನ್ನು ಬಳಸಬೇಕು ಎಂದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಚಿತ್ರತಂಡ, ಇದು ಐತಿಹಾಸಿಕ ಕಥೆಯಾಗಿರುವುದರಿಂದ ಈ ಸಿನಿಮಾದಲ್ಲಿ ಹೆಚ್ಚು ಯುದ್ಧದ ಸನ್ನಿವೇಶಗಳು ಬರುತ್ತೆ. ಅದಕ್ಕೆ ಕುದುರೆಯನ್ನು ಬಳಸಲಾಗಿದೆ ಎಂದು ಹೇಳಿದೆ. ಇದನ್ನೂ ಓದಿ:ಹಾಲಿವುಡ್ ಸಿನ್ಮಾದಲ್ಲಿ ನಟಿಸುವ ಜೊತೆಗೆ ನಿರ್ಮಾಣಕ್ಕೆ ಮುಂದಾದ ಪದ್ಮಾವತಿ
ದ್ವಿಪಾತ್ರದಲ್ಲಿ ಅಭಿಮಾನಿಗಳನ್ನು ರಂಜಿಸಲಿರುವ ರೈ!
ತಮಿಳಿನ ಖ್ಯಾತ ನಿರ್ದೇಶಕ ಮಣಿರತ್ನಂ ಆಕ್ಷನ್ ಕಟ್ ಹೇಳುತ್ತಿರುವ ಪೆÇನ್ನಿಯಿನ್ ಸೆಲ್ವನ್ ಚಿತ್ರದ ಮೂಲಕ 47 ವರ್ಷದ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಭರ್ಜರಿಯಾಗಿ ಕಮ್‍ಬ್ಯಾಕ್ ಮಾಡುತ್ತಿದ್ದಾರೆ. ಐಶ್ವರ್ಯ 4 ವರ್ಷಗಳ ನಂತರ ಮತ್ತೆ ಬಿಗ್ ಸ್ಕ್ರೀನ್‍ಗೆ ಮರಳಲು ರೆಡಿಯಾಗಿದ್ದು, ಸುಮಾರು 12 ವರ್ಷಗಳ ಬಳಿಕ ತಮಿಳು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ.